ಫಾಫ್ ಡು ಪ್ಲೆಸಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಕಂಬ್ಯಾಕ್!

ಫಾಫ್ ಡು ಪ್ಲೆಸಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಕಂಬ್ಯಾಕ್!

ಬೆಂಗಳೂರು: 2024 ರಲ್ಲಿ ವೆಸ್ಟ್ ಇಂಡೀಸ್ ಮತ್ತು ಅಮೆರಿಕದ ಜಂಟಿ ಆತಿಥ್ಯದಲ್ಲಿ ಟಿ 20 ವಿಶ್ವಕಪ್ ನಡೆಯುತ್ತಿದೆ. ಇದರಲ್ಲಿ ಭಾಗವಹಿಸುವ ಎಲ್ಲಾ 20 ತಂಡಗಳು ಈಗಾಗಲೇ ತಮ್ಮ ತಯಾರಿ ಆರಂಭಿಸಿವೆ. ಏತನ್ಮಧ್ಯೆ, ದಕ್ಷಿಣ ಆಫ್ರಿಕಾ ತಂಡದ ಮಾಜಿ ನಾಯಕ ಮತ್ತು ಆರ್​ಸಿಬಿ ತಂಡದ ಹಾಲಿ ನಾಯಕ ಫಾಫ್ ಡು ಪ್ಲೆಸಿಸ್ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಮರಳುವ ಬಗ್ಗೆ ದೊಡ್ಡ ಸುಳಿವು ನೀಡಿದ್ದಾರೆ.

ಅಬುಧಾಬಿಯಲ್ಲಿ ನಡೆಯುತ್ತಿರುವ ಟಿ10 ಲೀಗ್‌ನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಮರಳುವ ಬಗ್ಗೆ ಫಾಫ್ ಡು ಪ್ಲೆಸಿಸ್ ಮಹತ್ವದ ಸುಳಿವು ನೀಡಿದ್ದು, ಈ ವಿಚಾರವಾಗಿ ದಕ್ಷಿಣ ಆಫ್ರಿಕಾದ ತಂಡದ ಪ್ರಸ್ತುತ ಕೋಚ್ ರಾಬ್ ವಾಲ್ಟರ್ ಅವರೊಂದಿಗೆ ಮಾತುಕತೆ ನಡೆಯುತ್ತಿದೆ ಎಂಬುದನ್ನು ಬಹಿರಂಗಪಡಿಸಿದ್ದಾರೆ.

ವಾಸ್ತವವಾಗಿ ಫಾಫ್ ಡು ಪ್ಲೆಸಿಸ್ ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿ ವರ್ಷಗಳೆ ಕಳೆದಿವೆ. 39 ವರ್ಷದ ಫಾಫ್ 2020 ರಲ್ಲಿ ತಮ್ಮ ಕೊನೆಯ ಟಿ20 ಅಂತರಾಷ್ಟ್ರೀಯ ಪಂದ್ಯವನ್ನು ಆಡಿದ್ದರು. ಆದರೆ ಫಾಫ್, ವಿಶ್ವದ ವಿವಿಧ ದೇಶಗಳ ಕ್ರಿಕೆಟ್ ಲೀಗ್‌ಗಳಲ್ಲಿ ಭಾಗವಹಿಸುತ್ತಿದ್ದಾರೆ.

ಪ್ರಸ್ತುತ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ದೂರ ಉಳಿದಿದ್ದರೂ, ಫಾಫ್ ಟಿ20 ಕ್ರಿಕೆಟ್ ಲೀಗ್‌ನಲ್ಲಿ ಭಾಗವಹಿಸುವುದನ್ನು ಮುಂದುವರೆಸಿದ್ದಾರೆ. ಇದೀಗ ಫಾಫ್ ಡು ಪ್ಲೆಸಿಸ್ ಮತ್ತೊಮ್ಮೆ ದಕ್ಷಿಣ ಆಫ್ರಿಕಾ ತಂಡದ ಜೆರ್ಸಿ ಧರಿಸಿ ಮೈದಾನದಲ್ಲಿ ಕಾಣಿಸಿಕೊಳ್ಳಬಹುದು ಎಂದು ನಿರೀಕ್ಷಿಸಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos