ಬಿಸಿಯೂಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ

ಬಿಸಿಯೂಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಶಾಲೆಗಳಲ್ಲಿ ಹಾಗೂ ಹಾಸ್ಟೆಲ್ ಗಳಲ್ಲಿ ಊಟವನ್ನು ಸೇವಿಸಿ ಅಸ್ವಸ್ಥ ಗೊಳ್ಳುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಾನೆಯಿದೆ.

ಬಿಸಿಯೂಟ ಸೇವಿಸಿ ಇಬ್ಬರು ಶಿಕ್ಷಕರು ಸೇರಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವಂತಹ ಘಟನೆ ತುಮಕೂರಿನ ಕುಣಿಗಲ್ ತಾಲೂಕಿನ ಸೀನಪ್ಪನಹಳ್ಳಿ ಅಂಬಾಭವಾನಿ ಅನುದಾನಿತ ಪ್ರೌಢಶಾಲೆಯಲ್ಲಿ ಘಟನೆ ನಡೆದಿದೆ.

ನಿನ್ನೆ ಮಧ್ಯಾಹ್ನ ಶಾಲೆಯಲ್ಲಿ ನೀಡಲಾಗಿದ್ದ ಮೊಸರನ್ನವನ್ನು ಮಕ್ಕಳು ಸೇವನೆ ಮಾಡಿದ್ದಾರೆ. ರಾತ್ರಿ ವೇಳೆಗೆ ಮಕ್ಕಳ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದೆ. ಕೂಡಲೇ ಪೋಷಕರು ಕುಣಿಗಲ್ ತಾಲೂಕಿನ ಹಿಪ್ಪಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos