ರಾಜ್ಯದಲ್ಲಿ ಹೆಚ್ಚಿದ ಬರ ಪೀಡಿತ ಪ್ರದೇಶ! ರೈತ ಆತ್ಮಹತ್ಯೆಗೆ ಪ್ರಯತ್ನ?

ರಾಜ್ಯದಲ್ಲಿ ಹೆಚ್ಚಿದ ಬರ ಪೀಡಿತ ಪ್ರದೇಶ! ರೈತ ಆತ್ಮಹತ್ಯೆಗೆ ಪ್ರಯತ್ನ?

ಬೆಳಗಾವಿ: ಭಾರತವು ಕೃಷಿ ಪ್ರಧಾನ ದೇಶವಾಗಿದ್ದು, ಅದರ ಸುತ್ತಲೂ 70% ಜನರು ನೇರವಾಗಿ ಅಥವಾ ಪರೋಕ್ಷವಾಗಿ ಕೃಷಿಯನ್ನು ಅವಲಂಬಿಸಿದ್ದಾರೆ. ಆದರೆ ಭಾರತದಲ್ಲಿ ರೈತರ ಆತ್ಮಹತ್ಯೆ ಆತಂಕಕಾರಿಯಾಗಿದೆ. ಈ ಬಾರಿ ಕರ್ನಾಟಕದಲ್ಲಿ ಮಳೆ ಬಾರದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದು 195 ತಾಲ್ಲೂಕುಗಳನ್ನು ಬರಪೀಡಿತ ಎಂದು ರಾಜ್ಯ ಸರ್ಕಾರ ಘೋಷಿಸಲಾಗಿದೆ. ಈ ಹಿನ್ನೆಲೆ ಐಎಎಸ್ ಅಧಿಕಾರಿಗಳನ್ನೊಳಗೊಂಡ ಕೇಂದ್ರದ ಮೂರು ತಂಡಗಳು ಇಂದಿನಿಂದ ನಾಲ್ಕು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿಯ ಸಮೀಕ್ಷೆ ನಡೆಸಲಿದೆ, ಅದಂತೆ ಇಂದು ಶುಕ್ರವಾರ ಕೇಂದ್ರ ತಂಡ ಬೆಳಗಾವಿಯಲ್ಲಿ ಬರ ಸಮೀಕ್ಷೆ ನಡೆಸುವ ಸಮಯದಲ್ಲಿ ರೈತನೊಬ್ಬ ವಿಷದ ಬಾಟಲಿ ಹಿಡಿದು ಅಧಿಕಾರಿಗಳ ಬಳಿ ಬಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ನಲವತ್ತು ಎಕರೆ ಪ್ರದೇಶದಲ್ಲಿ ಬೆಳೆದ ಬೆಳೆ ಸಂಪೂರ್ಣವಾಗಿ ಹಾನಿಯಾಗಿದೆ. ಹೀಗಾಗಿ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಇದೆ ಎಂದು ರೈತ ಅಪ್ಪಾಸಾಹೇಬ್ ಲಕ್ಕುಂಡಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.ತಕ್ಷಣ ಪೊಲೀಸರು ರೈತನ ಕೈಯಲ್ಲಿದ್ದ ವಿಷದ ಬಾಟಲಿ ಕಸಿದುಕೊಂಡಿದ್ದಾರೆ. ಈ ಘಟನೆ ನಡೆದ ನಂತರ ಅಧಿಕಾರಿಗಳ ಹಾಗೂ ಸರ್ಕಾರದ ವಿರುದ್ಧ ಇನ್ನುಳಿದ ರೈತರು ಅಪ್ಪಾಸಾಹೇಬ್ ಜೊತೆ ಸೇರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂತಹ ನೂರಾರು ಅಧಿಕಾರಿಗಳು ಬರ ಬಂದಾಗ ಅಧಿಕಾರಿಗಳು ಬರುತ್ತಾರೆ ಹೋಗುತ್ತಾರೆ. ಆದ್ರೆ, ಪರಿಹಾರ ಮಾತ್ರ ಶೂನ್ಯ ಸರ್ಕಾರ ಬರೀ ಹೆಣ್ಣು ಮಕ್ಕಳಿಗೆ ಗ್ಯಾರಂಟಿ ಕೊಟ್ಟಿದೆ. ರೈತರಿಗೆ ಏನು ಕೊಟ್ಟಿದೇ ಎಂದು ಅಧಿಕಾರಿಗಳ ಮತ್ತು ಸರ್ಕಾರದ ವಿರುದ್ಧ ತಮ್ಮ ಅಳಲನ್ನು ಭಾವೋದ್ರೇಕವಾಗಿ ಅಧಿಕಾರಿಗಳ ಮುಂದೆ ತೋಡಿಕೊಂಡಿದ್ದಾರೆ.
ವರದಿಗಾರ
ಚಿದಾನಂದ

ಫ್ರೆಶ್ ನ್ಯೂಸ್

Latest Posts

Featured Videos