‘ಹೆಣ್ಣು’ ಮಗುವಿಗೆ ‘ಅಪ್ಪನಾದ ‘ಯೋಗಿ’..!

‘ಹೆಣ್ಣು’ ಮಗುವಿಗೆ ‘ಅಪ್ಪನಾದ ‘ಯೋಗಿ’..!

ಬೆಂಗಳೂರು, ಮೇ. 25, ನ್ಯೂಸ್ಎಕ್ಸ್ ಪ್ರೆಸ್:  ಲೂಸ್ ಮಾದ ಎಂದೇ ಖ್ಯಾತಿಯಾಗಿರುವ ನಟ ಯೋಗಿ ಪತ್ನಿ ಸಾಹಿತ್ಯ ಅವರಿಗೆ ಹೆಣ್ಣು ಮಗು ಜನಿಸಿದೆ.ಬೆಳಗ್ಗೆ 5 ಗಂಟೆ ಸುಮಾರಿಗೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮದರ್ ವುಡ್ ಆಸ್ಪತ್ರೆಯಲ್ಲಿ ಯೋಗಿ ಪತ್ನಿ ಸಾಹಿತ್ಯ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು  ವೈದ್ಯರು ತಿಳಿಸಿದ್ದಾರೆ. ಮನೆಗೆ ಯುವರಾಣಿ ಬಂದಿದ್ದಾಳೆ ಎಂದು  ನಟ ಯೋಗೀಶ್ ಕುಟುಂಬದವರು ತಮ್ಮ ಸಂತೋಷ ವ್ಯಕ್ತಪಡಿಸಿದ್ದಾರೆ. ತಮ್ಮ ಮುದ್ದು ಮಗಳನ್ನು  ತಮ್ಮ ಕೈಯಲ್ಲಿ ಹಿಡಿದುಕೊಂಡು ಖುಷಿ ಪಟ್ಟಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos