ಜೆಡಿಎಸ್ ಬೆಂಬಲಿತ ಸದಸ್ಯರಿಗೆ ಸನ್ಮಾನ

ಜೆಡಿಎಸ್ ಬೆಂಬಲಿತ ಸದಸ್ಯರಿಗೆ ಸನ್ಮಾನ

ಕೊರಟಗೆರೆ: ಗ್ರಾಮೀಣ ಪ್ರದೇಶದಲ್ಲಿ ಜೆಡಿಎಸ್‌ನ ಶಕ್ತಿ ಮತ್ತು ಬೇರು ಬಲವಾಗಿದೆ ಎನ್ನುವುದು ಈ ಮೂಲಕ ಸಾಬೀತು ಮಾಡಲಾಗಿದೆ. ಎಂದು ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಾಲಿಂಗಪ್ಪ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜೆಡಿಎಸ್ ಏರ್ಪಡಿಸಿದ್ದ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚಿಗೆ ನಡೆದ ಗ್ರಾಪಂ ಚುನಾವಣೆಯಲ್ಲಿ ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಶೇ. 60ಕ್ಕೂ ಹೆಚ್ಚು ಪಕ್ಷದ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದಾರೆ. ಜೆಡಿಎಸ್ ಪಕ್ಷವು ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಬಲಿಷ್ಠವಾಗಿದ್ದು, ಮಾಜಿ ಶಾಸಕ ಪಿ.ಆರ್.ಸುಧಾಕರ್ ಲಾಲ್ ನೇತೃತ್ವದಲ್ಲಿ ಈ ಕಾರ್ಯಕ್ರವನ್ನು ಪಟ್ಟಣದ ಮಾರುತಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿತ್ತು. ಜಿಲ್ಲೆಯ ಪ್ರಮುಖ ನಾಯಕರು ಆಗಮಿಸಲಿದ್ದು, ಪಕ್ಷದ ಗ್ರಾಪಂ ಸದಸ್ಯರುಗಳು. ಮುಖಂಡರು, ಕಾರ್ಯಕರ್ತರು ಕಾರ್ಯಕ್ರಮಕ್ಕೆ ಭಾಗವಹಿಸುವಂತೆ ತಿಳಿಸಿದರು.
ಕೋಳಾಲ ಜಿಪಂ ಸದಸ್ಯ ಶಿವರಾಮಯ್ಯ ಮಾತನಾಡಿ, ಭಾರತದ ಪ್ರಜಾಪ್ರಭತ್ವದ ವ್ಯವಸ್ಥೆ ಗ್ರಾಮೀಣ ಪ್ರದೇಶದಿಂದಲೇ ಅಡಿಪಾಯವಾಗಿದೆ. ಈ ಬಾರಿಯ ಗ್ರಾಪಂ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅತಿ ಹೆಚ್ಚು ಸದಸ್ಯರು ಕೊರಟಗೆರೆ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವುದು ಪಕ್ಷಕ್ಕೆ ಮತ್ತಷ್ಟು ಬಲ ನೀಡಿದೆ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos