ಜ್ವರದಿಂದ ಯುವತಿ ಸಾವು

ಜ್ವರದಿಂದ ಯುವತಿ ಸಾವು

ಚಾಮರಾಜನಗರ,ನ 26 : ಸಾಮೂಹಿಕ ಜ್ವರದಿಂದ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.
ಮೃತಪಟ್ಟ ಯುವತಿ ಗೀತಾ (20) ದುರ್ದೈವಿ. ಹನೂರು ತಾಲೂಕು ಉಯಿಲನತ್ತ ಗ್ರಾಮದಲ್ಲಿ 80ಕ್ಕೂ ಹೆಚ್ಚು ಕುಟುಂಬಗಳಿದ್ದು, ಪ್ರತಿ ಕುಟುಂಬದಲ್ಲೂ ಒಬ್ಬರಲ್ಲ ಒಬ್ಬರು ಜ್ವರ, ಮೈ-ಕೈನೋವು, ಮೂಳೆ ನೋವು, ಸಂಧಿನೋವಿನಿಂದ ಬಳಲುತ್ತಿದ್ದಾರೆ. ಸಾಮೂಹಿಕ ಜ್ವರದಿಂದ ಗ್ರಾಮಸ್ಥರು ಬಳುತ್ತಿದ್ದು, ಯುವತಿಯೊಬ್ಬಳು ಸಾವನ್ನಪ್ಪಿದ್ದಾಳೆ. ಇವರಿಗೆ ಕೇವಲ ಮಾತ್ರೆ ನೀಡಿ ಮತ್ತೆ ಯಾವುದೇ ಚಿಕಿತ್ಸೆ ನೀಡದೆ ಆರೋಗ್ಯ ಇಲಾಖೆ ನಿರ್ಲಕ್ಷ್ಯ ವಹಿಸಿದೆ.
ತೀವ್ರ ಜ್ವರ ಹಾಗು ಸಂಧಿನೋವಿನಿಂದ ಬಳಲುತ್ತಿರುವುದರಿಂದ ಪಕ್ಕದ ಊರುಗಳಿಗೆ ತೆರಳಿ ಚಿಕಿತ್ಸೆ ಪಡೆಯುಲು ಸಾಧ್ಯವಾಗದೆ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಆದರೆ ನಾಮಕಾವಾಸ್ತೆಗೆ ಮಾತ್ರೆ ಕೊಟ್ಟು ಆರೋಗ್ಯ ಇಲಾಖೆ ನಿರ್ಲಕ್ಷ್ಯ ವಹಿಸಿದೆ. ಇಲಾಖೆಯಿಂದ ಗ್ರಾಮದಲ್ಲೇ ಒಂದು ಕ್ಯಾಂಪ್ ಮಾಡಿ ಸಮರ್ಪಕ ಚಿಕಿತ್ಸೆ ನೀಡಬೇಕು ಇಲ್ಲವೇ ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos