ನಾನಿ ನಟನೆಯ 33ನೇ ಚಿತ್ರ ಅನೌನ್ಸ್

ನಾನಿ ನಟನೆಯ 33ನೇ ಚಿತ್ರ ಅನೌನ್ಸ್

ಬೆಂಗಳೂರು: ದಸರಾ ಮೂಲಕ ಧಮಾಕ ಎಬ್ಬಿಸಿದ್ದ ನ್ಯಾಚುರಲ್ ಸ್ಟಾರ್ ನಾನಿ ಮತ್ತೊಮ್ಮೆ ಅದೇ ತಂಡದ ಜೊತೆ ಕೈ ಜೋಡಿಸಿದ್ದಾರೆ. ನಾನಿ ಅಭಿನಯಿಸ್ತಿರುವ 33ನೇ ಸಿನಿಮಾ ಘೋಷಣೆಯಾಗಿದೆ. ದಸರಾಗೆ ಆಕ್ಷನ್ ಕಟ್ ಹೇಳಿ ಮೊದಲ ಚಿತ್ರದಲ್ಲೇ ನಿರ್ದೇಶಕರಾಗಿ ಖ್ಯಾತಿ ಗಳಿಸಿರುವ ಶ್ರೀಕಾಂತ್ ಒಡೆಲಾ, ನಿರ್ಮಾಪಕ ಸುಧಾಕರ್ ಚೆರುಕುರಿ ಹಾಗೂ ನಾನಿ ಎರಡನೇ ಬಾರಿಗೆ ಒಂದಾಗಿದ್ದಾರೆ. ಈ ಕ್ರೇಜಿ ಕಾಂಬೋದ ಹೊಸ ಪ್ರಾಜೆಕ್ಟ್ ಫಸ್ಟ್ ಲುಕ್ ರಿವೀಲ್ ಆಗಿದೆ.

ಬಾಯಲ್ಲಿ ಸಿಗರೇಟ್ ಹಿಡಿದು ನಾನಿ ಕಾಣಿಸಿಕೊಂಡಿದ್ದಾರೆ. ಈ ಲುಕ್ ಸಖತ್ ರಗಡ್ ಆಗಿದೆ. ಕೆಂಪು ಬಣ್ಣದ ಪೋಸ್ಟರ್​ನಲ್ಲಿ ಸಾಕಷ್ಟು ಸಂಖ್ಯೆಯ ಜನರನ್ನು ಕೂಡ ತೋರಿಸಲಾಗಿದೆ. ಪೋಸ್ಟರ್​ ಮೇಲೆ ಹಲವು ವಿಚಾರಗಳನ್ನು ಬರೆಯಲಾಗಿದೆ. ಮತ್ತೊಂದು ಪವರ್ ಪ್ಯಾಕ್ಡ್ ಆಕ್ಷನ್ ಚಿತ್ರದೊಂದಿಗೆ ನಾನಿ ಪರಿಚಯ ಎಂದು ಶ್ರೀಕಾಂತ್ ತಮ್ಮ ಹೊಸ ಸಿನಿಮಾ ಬಗ್ಗೆ ಮಾಹಿತಿ ನೀಡಿದ್ದಾರೆ.

ಸುಧಾಕರ್ ಚೆರುಕುರಿ ನಾನಿ 33ನೇ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ‘ಶ್ರೀ ಲಕ್ಷ್ಮೀ ವೆಂಕಟೇಶ್ವರ ಸಿನಿಮಾಸ್’ ಬ್ಯಾನರ್ ಅಡಿಯಲ್ಲಿ ಸಿನಿಮಾ ಮೂಡಿ ಬರುತ್ತಿದೆ. ಈ ಚಿತ್ರದಲ್ಲಿ ನಾನಿ ಹಿಂದೆಂದೂ ಕಾಣದ ಅವತಾರದಲ್ಲಿ ಎಂಟ್ರಿ ಕೊಡಲಿದ್ದಾರೆ. ಶೀಘ್ರವೇ ಸಿನಿಮಾ ಶೂಟಿಂಗ್ ಆರಂಭ ಆಗಲಿದ್ದು, 2025ಕ್ಕೆ ಸಿನಿಮಾ ತೆರೆಗೆ ಬರಲಿದೆ.

 

ಫ್ರೆಶ್ ನ್ಯೂಸ್

Latest Posts

Featured Videos