15ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ವಿಶೇಷತೆಗಳು

15ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ವಿಶೇಷತೆಗಳು

ಬೆಂಗಳೂರು: ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಮತ್ತೆ ಬಂದಿದೆ. 15ನೇ ಬೆಂಗಳೂರು ಫಿಲಂ ಫೆಸ್ಟ್ ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿದ್ದು, 15ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 29ರಿಂದ ಮಾರ್ಚ್‌ 07ರ ವರೆಗೆ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. ಈ ಬಾರಿಯ ಚಲನಚಿತ್ರೋತ್ಸವ ಹಲವು ಕಾರಣಗಳಿಗೆ ಮುಖ್ಯವಾದುದಾಗಿದೆ. ಈ ಬಾರಿ 50ಕ್ಕೂ ಹೆಚ್ಚು ರಾಷ್ಟ್ರಗಳಿಂದ. ಆಸ್ಕರ್ ಪ್ರಶಸ್ತಿಗೆ ನಾಮಾಂಕಿತವಾದ ಸಿನಿಮಾಗಳೂ ಸೇರಿದಂತೆ 200ಕ್ಕೂ ಹೆಚ್ಚು ಚಲನಚಿತ್ರಗಳು ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ.

ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 15 ನೇ ಆವೃತ್ತಿಯನ್ನು ಫೆಬ್ರವರಿ 29ರ ಸಂಜೆ ಉದ್ಘಾಟನೆಯನ್ನು ವಿಧಾನಸೌಧದ ಮುಂಭಾಗದಲ್ಲಿ ಏರ್ಪಡಿಸಲಾಗಿದ್ದು ಮುಖ್ಯಮಂತ್ರಿಗಳು ನೆರವೇರಿಸಲಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ದೇಶವಿದೇಶಗಳಲ್ಲಿ ಮನ್ನಣೆ ಪಡೆದಿರುವ ಚಿತ್ರೋತ್ಸವವಾಗಿದ್ದು, ವಿದೇಶಿ ಚಿತ್ರಗಳನ್ನು ಪ್ರದರ್ಶಿಸಲಾಗುವುದಲ್ಲದೆ, ಕನ್ನಡ ಸೇರಿ ದೇಶದ ವಿವಿಧ ಭಾಷಾ ಚಿತ್ರಗಳನ್ನು ಪ್ರದರ್ಶಿಸಲಾಗುವುದು. ಮಾರ್ಚ್ 7 ರಂದು ಸಮಾರೋಪ ಸಮಾರಂಭ ನಡೆಯಲಿದ್ದು ಅಂದು ರಾಜ್ಯಪಾಲರು ಪ್ರಶಸ್ತಿಗಳನ್ನು ವಿತರಿಸಲಿದ್ದಾರೆ.

ಈ ಬಾರಿಯ ಚಲನಚಿತ್ರೋತ್ಸವದಲ್ಲಿ ಹಲವು ವೈಶಿಷ್ಟ್ಯಗಳಿವೆ. ಕನ್ನಡ ಚಲನಚಿತ್ರರಂಗಕ್ಕೆ 90 ವರ್ಷ ತುಂಬಲಿದ್ದು, ಈ ಸಂಭ್ರಮಾಚರಣೆಯನ್ನು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಆಚರಿಸಲಾಗುತ್ತಿದೆ. ಕನ್ನಡ ಚಿತ್ರಗಳು ಪ್ರಸ್ತುತ ಸಂದರ್ಭದಲ್ಲಿ ವಿಶ್ವದ ಎಲ್ಲ ಕಡೆ ಜನಪ್ರಿಯವಾಗುತ್ತಿದ್ದು ಕನ್ನಡ ಚಿತ್ರರಂಗ ನಡೆದು ಬಂದ ದಾರಿ, ಹಾಗೂ ಕನ್ನಡದಲ್ಲಿ ಮೈಲುಗಲ್ಲು ಸ್ಥಾಪಿಸಿದ ಚಾರಿತ್ರಿಕ, ಸಾಂಸ್ಕೃತಿಕ ಮೌಲ್ಯಗಳನ್ನು ಪ್ರತಿವಾದಿಸುವ ವಿಶೇಷ ಚಲನಚಿತ್ರಗಳ ಉತ್ಸವವನ್ನು ಇದೇ ಸಂದರ್ಭದಲ್ಲಿ ಏರ್ಪಡಿಸಲಾಗಿದೆ. ಅಲ್ಲದೆ ಕರ್ನಾಟಕ ಎಂದು ನಾಮಕರಣಗೊಂಡ ನೆನಪಿಗೆ ಕರ್ನಾಟಕ 50 ಸುವರ್ಣ ಸಂಭ್ರಮ ಎಂಬ ಕಾರ್ಯಕ್ರಮದ ಮೂಲಕ ಕರ್ನಾಟಕದ ಹಿರಿಮೆಯನ್ನು ಸಾರುವ ಕಾರ್ಯಕ್ರಮ ಸಂಯೋಜಿಸಲಾಗಿದೆ.

ಮಾರ್ಚ್ ಒಂದರಿಂದ ರಾಜಾಜಿನಗರದಲಿರುವ ಒರಾಯನ್ ಮಾಲ್‌ನ 11 ವರದೆಗಳಲ್ಲಿ ಪ್ರದರ್ಶನ ನಡೆಯಲಿದೆ. ಮಾರ್ಚ್ 7ರಂದು ಸಮಾರೋಪ ಸಮಾರಂಭ ಮತ್ತು ಏಷಿಯನ್, ಭಾರತೀಯ ಹಾಗೂ ಕನ್ನಡ ಸಿನಿಮಾ ಸ್ಪರ್ಧಾ ವಿಭಾಗಗಳ ವಿಜೇತರಿಗೆ ಪ್ರಶಸ್ತಿ ಪ್ರದಾನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯಲಿದೆ. ಸಾರ್ವಜನಿಕರಿಗೆ 800 ರೂ, ಚಿತ್ರೋದ್ಯಮದ ಸದಸ್ಯರಿಗೆ 400 ರೂ, ಹಿರಿಯ ನಾಗರಿಕರಿಗೆ 400 ರೂ ಟಿಕೆಟ್ ದರ ನಿಗದಿಪಡಿಸಲಾಗಿದೆ

 

ಫ್ರೆಶ್ ನ್ಯೂಸ್

Latest Posts

Featured Videos