ಬೆಂಗಳೂರು: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಐದು ಟೆಸ್ಟ್ ಪಂದ್ಯ ಸರಣಿ ಈಗಾಗಲೇ ಆರಂಭವಾಗಿದ್ದು ಮೊದಲ ಎರಡು ಟೆಸ್ಟ್ ಸರಣಿಯು ಮುಕ್ತಾಯವಾಗಿ 1-1 ಸಮಬಲ ಸಾಧಿಸಿದ್ದೇವೆ.
ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯ ಅಂತಿಮ ಮೂರು ಟೆಸ್ಟ್ ಪಂದ್ಯಗಳಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಗಾಯದ ಸಮಸ್ಯೆಯಿಂದಾಗಿ 2ನೇ ಟೆಸ್ಟ್‌ನಿಂದ ಹೊರಗುಳಿದಿದ್ದ ಕೆಎಲ್ ರಾಹುಲ್ ಹಾಗೂ ರವೀಂದ್ರ ಜಡೇಜಾ ಅವರುಗಳು ತಂಡಕ್ಕೆ ಕಮ್‌ಬ್ಯಾಕ್ ಮಾಡಿದ್ದರೆ. ಬೆನ್ನುನೋವಿನಿಂದ ಬಳಲುತ್ತಿರುವ ಶ್ರೇಯಸ್ ಅಯ್ಯರ್ ಅವರನ್ನು ತಂಡದಿಂದ ಕೈ ಬಿಡಲಾಗಿದೆ.
ಮತ್ತೊಂದೆಡೆ 2ನೇ ಟೆಸ್ಟ್‌ನಿಂದ ಹೊರಗುಳಿದಿದ್ದ ಮೊಹಮ್ಮದ್ ಸಿರಾಜ್ ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದರೆ. ಯುವ ಆಟಗಾರ ಆಕಾಶ್ ದೀಪ್ ಅವರನ್ನು ಮೊದಲ ಬಾರಿಗೆ ರಾಷ್ಟ್ರೀಯ ತಂಡಕ್ಕೆ ಆಯ್ಕೆ ಮಾಡಲಾಗಿದ್ದು, ಚೊಚ್ಚಲ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ನಿರೀಕ್ಷೆಯಲ್ಲಿದ್ದಾರೆ. ಉಳಿದಂತೆ ರೋಹಿತ್ ಶರ್ಮ ಸಾರಥ್ಯದಲ್ಲೇ ಕಣಕ್ಕಿಳಿಯುವ ಟೀಮ್ ಇಂಡಿಯಾಕ್ಕೆ ವಿರಾಟ್ ಕೊಹ್ಲಿ ಅನುಪಸ್ಥಿತಿ ಕಾಡಲಿದೆ.
ಭಾರತ ತಂಡ:
ರೋಹಿತ್ ಶರ್ಮ(ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ರಜತ್ ಪತಿದಾರ್, ಸರ್ಫರಾಜ್ ಖಾನ್, ರವೀಂದ್ರ ಜಡೇಜಾ, ಧ್ರುವ್ ಜುರೆಲ್, ಕೆಎಸ್ ಭರತ್, ರವಿಚಂದ್ರನ್ ಅಶ್ವಿನ್, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.