ಇಂದು ಫೈನಲ್ ಟ್ವೆಂಟಿ-20

ಇಂದು ಫೈನಲ್ ಟ್ವೆಂಟಿ-20

ಮುಂಬಯಿ, ಡಿ. 11 : ಭಾರತ ಹಾಗೂ ವೆಸ್ಟ್ಇಂಡೀಸ್ ನಡುವಣ ಟ್ವೆಂಟಿ-20 ಸರಣಿ ರೋಚಕ ಹಂತಕ್ಕೆ ತಲುಪಿದ್ದು, ಮುಂಬಯಿಯ ವಾಂಖೆಡೆ ಮೈದಾನದಲ್ಲಿ ಬುಧವಾರ ನಡೆಯಲಿರುವ ಪಂದ್ಯವು ಫೈನಲ್ ಮಹತ್ವವನ್ನು ಪಡೆದುಕೊಂಡಿದೆ. ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಇತ್ತಂಡಗಳು 1-1ರ ಸಮಬಲ ದಾಖಲಿಸಿದ್ದು, ಅಂತಿಮ ಪಂದ್ಯದಲ್ಲಿ ವಿಜೇತರ ನಿರ್ಣಯವಾಗಲಿದೆ.ಹೈದರಾಬಾದ್ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ಜೀವನಶ್ರೇಷ್ಠ ಆಟದ (94*) ನೆರವಿನಿಂದ ದಾಖಲೆ ರನ್ಗಳ ಗುರಿ ಬೆನ್ನಟ್ಟಿದ ಭಾರತ ಆರು ವಿಕೆಟ್ ಅಂತರದ ಭರ್ಜರಿ ಗೆಲುವು ಬಾರಿಸಿತ್ತು. ಆದರೆ ತಿರುವನಂತಪುರದಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಎಂಟು ವಿಕೆಟ್ ಅಂತರದ ಸೋಲಿಗೆ ಶರಣಾಗಿತ್ತು. ಈ ಹಿನ್ನಲೆಯಲ್ಲಿ ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಅಂತಿಮ ಪಂದ್ಯ ಹೆಚ್ಚು ರೋಚಕತೆ ಪಡೆದಿದೆ.ಪ್ರಮುಖವಾಗಿಯೂ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅವರನ್ನೇ ಹೆಚ್ಚು ನೆಚ್ಚಿಕೊಂಡಿರುವುದು ಹಿನ್ನಡೆಗೆ ಕಾರಣವಾಗಿದೆ. ಮಧ್ಯಮ ಹಾಗೂ ಕೆಳ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ.
ಮೊನಚು ಕಳೆದುಕೊಂಡ ಬೌಲಿಂಗ್ ವಿಭಾಗವು ಚಿಂತೆಗೆ ಕಾರಣವಾಗಿದೆ. ಭುವನೇಶ್ವರ್ ಕುಮಾರ್, ದೀಪಕ್ ಚಹರ್ ಜತೆಗೆ ಸ್ಪಿನ್ನರ್ಗಳು ವಿಕೆಟ್ ಕಬಳಿಸುವಲ್ಲಿ ವಿಫಲವಾಗಿದ್ದಾರೆ. ಇದು ಆತಂಕದ ವಿಷಯವಾಗಿದೆ.ಮೊದಲು ಬ್ಯಾಟಿಂಗ್ ನಡೆಸಿ ಗುರಿ ಡಿಫೆಂಡ್ ಮಾಡಲು ವಿಫಲವಾಗುತ್ತಿರುವುದು ದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ಮುಂದಿನ ವರ್ಷ ನಡೆಯಲಿರುವ ಟಿ20 ವಿಶ್ವಕಪ್ ಹಿನ್ನಲೆಯಲ್ಲಿ ಆದಷ್ಟು ಬೇಗನೇ ಈ ಎಲ್ಲ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳಬೇಕಿದೆ.

ಫ್ರೆಶ್ ನ್ಯೂಸ್

Latest Posts

Featured Videos