ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೆರೆವಾಸ ಅನುಭವಿಸುತ್ತಿರುವ ನಟ ದರ್ಶನ್ ಅವರಿಗೆ ಜೈಲಿನಲ್ಲಿ ವಿಪರೀತ ಆರೋಗ್ಯ ಸಮಸ್ಯೆ ಕಾಣಿಸುತ್ತಿರುವುದರಿಂದ ಇದೀಗ ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್ ದರ್ಶನ್ರ ಆರೋಗ್ಯ ಸಮಸ್ಯೆಯನ್ನು ಪರಿಗಣನೆಗೆ ತೆಗೆದುಕೊಂಡು 6 ವಾರಗಳ ಕಾಲದ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಇನ್ನು ನಟ ದರ್ಶನ್ ಗೆ ನೀಡಲಾಗಿರುವ ಮಧ್ಯಂತರ ಜಾಮೀನಿಗೆ ಹೈಕೋರ್ಟ್ ಸಾಕಷ್ಟು ಷರತ್ತುಗಳನ್ನು ವಿಧಿಸಿದೆ. ಎರಡೂ ಕಡೆಯ ವಾದ ಆಲಿಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು, ‘ವೈದ್ಯಕೀಯ ಚಿಕಿತ್ಸೆ ವಿಚಾರಣಾಧೀನ ಕೈದಿಯ ಹಕ್ಕು’ ಎಂದು ಉಲ್ಲೇಖಿಸಿ ಇದೀಗ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದಾರೆ.
ಆದರೆ ಆರು ವಾರಗಳ ಮಧ್ಯಂತರ ಜಾಮೀನು ಇದಾಗಿದ್ದು, ಚಿಕಿತ್ಸೆ ಕಾರಣಕ್ಕಾಗಿ ಜಾಮೀನು ನೀಡಲಾಗಿದೆ. ಜಾಮೀನು ಪಡೆದ ಬಳಿಕ ಒಂದು ವಾರದಲ್ಲಿ ನಟ ದರ್ಶನ್ ಆಸ್ಪತ್ರೆ ದಾಖಲಾತಿ ಮತ್ತು ಚಿಕಿತ್ಸೆ ವಿವರವನ್ನು ಕೋರ್ಟ್ ಗೆ ನೀಡಬೇಕು ಎಂದು ಹೇಳಿದೆ.
ಅಲ್ಲದೆ ದರ್ಶನ್ ಪಾಸ್ಪೋರ್ಟ್ ಅನ್ನು ಕೋರ್ಟ್ ಸುಪರ್ಧಿಗೆ ನೀಡಬೇಕು ಎಂದು ಹೇಳಿದ್ದು, ಪ್ರತೀವಾರವೂ ಚಿಕಿತ್ಸಾ ವಿವರ ನೀಡಬೇಕು. ಚಿತ್ರೀಕರಣದಲ್ಲಿ ಪಾಲ್ಗೊಳ್ಳುವಂತಿಲ್ಲ ಎಂದು ಹೇಳಿದೆ.