ಬೆಂಗಳೂರು: ನಾಗ್ಪುರದ ವಿಸಿಎ ಕಲಮ್ನ ಕ್ರೀಡಾಂಗಣದಲ್ಲಿ ನಡೆದ ಕರ್ನಲ್ ಸಿಕೆ ನಾಯುಡು ಟ್ರೋಫಿ ಪಂದ್ಯಾವಳಿಯ ಸೆಮಿಫೈನಲ್ ಪಂದ್ಯದಲ್ಲಿ ವಿದರ್ಭ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಕರ್ನಾಟಕ ತಂಡ ಫೈನಲ್‌ಗೆ ಲಗ್ಗೆಯಿಟ್ಟಿದೆ.
ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ವಿದರ್ಭ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದಿತ್ತು. ಆದರೆ ಸಿಕೆ ನಾಯುಡು ಟ್ರೋಫಿ ಟೂರ್ನಿಯಲ್ಲಿ ಕರ್ನಾಟಕ ತಂಡದ ಆಟಗಾರರು ಈ ತಪ್ಪು ಮಾಡಲಿಲ್ಲ.
ಟಾಸ್ ಗೆದ್ದ ಕರ್ನಾಟಕ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲ ಇನ್ನಿಂಗ್ಸ್‌ನಲ್ಲಿ ಕರ್ನಾಟಕ 466 ರನ್‌ಗಳಿಗೆ ಆಲೌಟ್ ಆಯಿತು. 73 ರನ್‌ಗಳಿಗೆ ಆಲೌಟ್ ಆದ ವಿದರ್ಭ ಬಳಿಕ ಮೊದಲ ಇನ್ನಿಂಗ್ಸ್ ಬ್ಯಾಟಿಂಗ್ ಮಾಡಿದ ವಿದರ್ಭ ಕೇವಲ 73 ರನ್‌ಗಳಿಗೆ ಆಲೌಟ್ ಆಯಿತು.
ಬೃಹತ್ ಮುನ್ನಡೆ ಪಡೆದ ಕರ್ನಾಟಕ ಮೊದಲ ಇನ್ನಿಂಗ್ಸ್‌ನಲ್ಲಿ 393 ರನ್‌ಗಳ ಬೃಹತ್ ಮುನ್ನಡೆ ಪಡೆದುಕೊಂಡ ಕರ್ನಾಟಕ ಎರಡನೇ ಇನ್ನಿಂಗ್ಸ್‌ನಲ್ಲಿ 141 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಯಿತು. ಈ ಮೂಲಕ ವಿದರ್ಭ ತಂಡಕ್ಕೆ 535 ರನ್‌ಗಳ ಬೃಹತ್ ಗುರಿ ನೀಡಿತು.
ವಿದರ್ಭ 535 ರನ್‌ಗಳ ಬೃಹತ್ ಮೊತ್ತ ಬೆನ್ನತ್ತಿದ ವಿದರ್ಭ ತಂಡ 256 ರನ್‌ಗಳಿಗೆ ಆಲೌಟ್ ಆಗುವ ಮೂಲಕ 278 ರನ್‌ಗಳಿಂದ ಸೋಲೊಪ್ಪಿಕೊಂಡಿತು. ಸಿಕೆ ನಾಯ್ಡು ಟ್ರೋಫಿ ಮತ್ತೊಂದು ಸೆಮಿಫೈನಲ್ ಪಂದ್ಯದಲ್ಲಿ ಉತ್ತರ ಪ್ರದೇಶ ಮತ್ತು ಮುಂಬೈ ಸೆಣೆಸುತ್ತಿದ್ದು, ಈ ಪಂದ್ಯದಲ್ಲಿ ಗೆದ್ದ ತಂಡದ ವಿರುದ್ಧ ಕರ್ನಾಟಕ ಫೈನಲ್ ಪಂದ್ಯದಲ್ಲಿ ಸೆಣೆಸಲಿದೆ.