ಸಂಜು ಸ್ಯಾಮ್ಸನ್ ಗೆ ಭಾರಿ ದಂಡ ವಿಧಿಸಿದ ಬಿಸಿಸಿಐ

ಸಂಜು ಸ್ಯಾಮ್ಸನ್ ಗೆ ಭಾರಿ ದಂಡ ವಿಧಿಸಿದ ಬಿಸಿಸಿಐ

ಬೆಂಗಳೂರು: ನಿನ್ನೆ ನಡೆದ ಜೈಪುರದ ಸವಾಯಿ ಮಾನ್‌ಸಿಂಗ್ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ 24ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಗುಜರಾತ್ ಟೈಟನ್ಸ್ ತಂಡವು ಕೊನೆಯ ಎಸೆತದ ರೋಚಕ ಗೆಲುವು ಸಾಧಿಸಿತು. ಗುಜರಾತ್ ಟೈಟಾನ್ಸ್ ವಿರುದ್ಧ ಸವಾಯ್ ಮಾನ್ ಸಿಂಗ್ ಸ್ಟೇಡಿಯಂನಲ್ಲಿ ಬುಧವಾರ ರಾತ್ರಿ ನಡೆದ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಪಡೆಯು 17ನೇ ಸೀಸನ್ ನ ಮೊದಲ ಸೋಲು ಕಂಡಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದ ಕಾರಣ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಅವರಿಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.

“ಇದು ಐಪಿಎಲ್‌ನ ನೀತಿ ಸಂಹಿತೆಯ ಅಡಿಯಲ್ಲಿ ಈ ಋತುವಿನ ಮೊದಲ ಅಪರಾಧವಾಗಿದ್ದು, ಕನಿಷ್ಠ ಓವರ್ ರೇಟ್ ಅಪರಾಧಗಳಿಗೆ ಸಂಬಂಧಿಸಿದಂತೆ ಸ್ಯಾಮ್ಸನ್‌ಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ” ಎಂದು ಐಪಿಎಲ್ ಪ್ರಕಟಣೆ ತಿಳಿಸಿದೆ.

 

ಫ್ರೆಶ್ ನ್ಯೂಸ್

Latest Posts

Featured Videos