ಹಿಂದೂ ವೋಟು ಬೇಡ ಎನ್ನುವ ಫೇಕ್ ಪೋಸ್ಟ್: 7 ಜನರ ವಿರುದ್ದ FIR

ಹಿಂದೂ ವೋಟು ಬೇಡ ಎನ್ನುವ ಫೇಕ್ ಪೋಸ್ಟ್: 7 ಜನರ ವಿರುದ್ದ FIR

ಬೆಂಗಳೂರು: ಹಿಂದುಗಳ ಮತ ನಮಗೆ ಬೇಡ, ಮುಸ್ಲಿಮರ ವೋಟು ನಮಗೆ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸುದ್ದಿಯೊಂದು ಹರಿದಾಡುತ್ತಿದೆ. ಫ್ಯಾಕ್ಟ್​ಚೆಕ್ ಮಾಡಿ ನೋಡಿದರೆ ಈ ರೀತಿಯಾಗಿ ಯಾವುದೇ ಸುದ್ದಿ ಪತ್ರಿಕೆಗಳಲ್ಲಿ ಪ್ರಕಟವಾಗಿಲ್ಲ. ಈ ರೀತಿಯಾಗಿ ನಕಲಿ ಸುದ್ದಿಯೊಂದನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ ಎಂದು ತಿಳಿದುಬಂದಿದೆ

ಸಾಮಾಜಿಕ ಜಾಲತಾಣಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹಿಂದೂ ವೋಟ್ ಬೇಡ, ಮುಸ್ಲಿಂ ವೋಟ್ ಸಾಕು ಎಂದು ಹೇಳಿಕೆ ನೀಡಿದ್ದಾರೆ ಎಂದು ಸುಳ್ಳು ಸುದ್ದಿ ಪತ್ರಿಕಾ ತುಣುಕು ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಏಳು ಜನರ ವಿರುದ್ಧ FIR ದಾಖಲಾಗಿದೆ.

ಈ ಸಂಬಂಧ ಕಾಂಗ್ರೆಸ್ ಕಾನೂನು ಘಟನೆ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿತ್ತು. ಈ ದೂರಿನ ಮೇರೆಗೆ ಸದ್ಯ ಪ್ರಭಾಕರ್, ವಸಂತ ಗಿಳಿಯಾರ್ ಸೇರಿದಂತೆ ಒಟ್ಟು 7 ಜನರು ವಿರುದ್ದ ಎಫ್​ಐಆರ್ ದಾಖಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos