ಆಂಜಿನಪ್ಪ ವಿರುದ್ಧ ಎಫ್‌ಐಆರ್ ದಾಖಲು

ಆಂಜಿನಪ್ಪ ವಿರುದ್ಧ ಎಫ್‌ಐಆರ್ ದಾಖಲು

ಚಿಕ್ಕಬಳ್ಳಾಪುರ, ಡಿ. 13: ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ್ದ ಚಿಕ್ಕಬಳ್ಳಾಪುರ ಉಪ ಚುನಾವಣೆಯ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಎಂ. ಆಂಜಿನಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಡಿ. 11ರಂದು ಉಪ ಚುನಾವಣೆ ಫಲಿತಾಂಶದ ನಂತರ, ಚಿಕ್ಕಬಳ್ಳಾಪುರದ ಕಾಂಗ್ರೆಸ್ ನ ಪರಾಜಿತ ಅಭ್ಯರ್ಥಿ ಎಂ ಆಂಜಿನಪ್ಪ ಎಸ್ ಎಂ ಕೃಷ್ಣ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸಿದ್ದರು. ಈ ಕುರಿತಂತೆ ಅವರ ಅಭಿಮಾನಿಗಳು ಪೊಲೀಸರಿಗೆ ದೂರು ನೀಡಿದ್ದರು. ಇದೀಗ ಎಂ ಆಂಜಿನಪ್ಪ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಚಿಕ್ಕಬಳ್ಳಾಪುರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದು, ಸೋಲನ್ನು ಎಂ ಆಂಜಿನಪ್ಪ ಬಿಜೆಪಿಯ ಸುಧಾಕರ್ ವಿರುದ್ಧ ಕಂಡಿದ್ದರು. ಇದಾದ ಬಳಿಕ ಡಿಸೆಂಬರ್ 11ರಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಅವರು, ತಮಗೆ ಮತ ನೀಡಿದವರಿಗೆ ಕೃತಜ್ಞತೆ ಸಲ್ಲಿಸಿದ್ದಲ್ಲದೇ, ಇದೇ ಸಂದರ್ಭದಲ್ಲಿ ತಮಗೆ ಟಿಕೆಟ್ ಕೈ ತಪ್ಪಿಸಿದ್ದ ಎಸ್ ಎಂ ಕೃಷ್ಣಾ ವಿರುದ್ಧ ವಾಗ್ದಾಳಿ ನಡೆಸಿದ್ದರು. ಜೊತೆಗೆ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು.

ಹೀಗೆ ಅವಾಚ್ಯ ಶಬ್ದಗಳಿಂದ ಹಿರಿಯ ರಾಜಕೀಯ ನಾಯಕ ಎಸ್ ಎಂ ಕೃಷ್ಣಾ ಅವರನ್ನು ನಿಂದಿಸಿದ್ದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಎಂ ಆಂಜಿನಪ್ಪ ವಿರುದ್ಧ ಅವರ ಅಭಿಮಾನಿಯೊಬ್ಬರು ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರನ್ನು ಆಧರಿಸಿ ಇದೀಗ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಎಂ ಆಂಜಿನಪ್ಪ ವಿರುದ್ಧ ಐಪಿಸಿ ಸೆಕ್ಷನ್ 153, 504 ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos