ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್ಐಆರ್

ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್ಐಆರ್

ಬೆಂಗಳೂರು: ಬೆಂಗಳೂರಿನ ನಗರ್ತಪೇಟೆಯಲ್ಲಿರುವ ಮೊಬೈಲ್ ಅಂಗಡಿ‌ ಮಾಲೀಕ ಮುಖೇಶ್ ಎಂಬುವರ ಮೇಲೆ ನಡೆದಿದ್ದ ಹಲ್ಲೆ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಈ ವೇಳೆ ದ್ವೇಷ ಭಾಷಣ ಮಾಡಿದ ಆರೋಪ ಮೇಲೆ ಬಿಜೆಪಿ ನಾಯಕ ಮತ್ತು ದಕ್ಷಿಣ ಬೆಂಗಳೂರು ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.

ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜ್ಯ ಚುನಾವಣಾ ಆಯೋಗ ನೀಡಿದ ಸೂಚನೆ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಜಾನ್ ವೇಳೆ ಮೊಬೈಲ್ ಅಂಗಡಿಯಲ್ಲಿ ಭಜನೆ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ಮಾಡಿದ್ದ ಪ್ರಕರಣವನ್ನು ಖಂಡಿಸಿ ಬುಧವಾರ ನಗರತ್‌ ಪೇಟೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ಸಂಸದ ತೇಜಸ್ವಿ ಸೂರ್ಯ ಅವರು, ಮತೀಯ ಭಾವನೆಗಳನ್ನು ಕೆರಳಿಸುವಂತಹ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಕ್ರಮಕೈಗೊಳ್ಳಿ ಎಂದು ಚಿಕ್ಕಪೇಟೆ ನಿವಾಸಿ ಸಾವಿತ್ರಿಹಳ್ಳಿ ಎಂಬುವರು ರಾಜ್ಯ ಚುನಾವಣಾ ಆಯೋಗಗಕ್ಕೆ ದೂರು ನೀಡಿದ್ದರು. ಆಯೋಗದ ಸೂಚನೆಯ ಹಿನ್ನೆಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos