ಬೆಂಗಳೂರು: ರಾಜ್ಯದ ರಾಜ್ಯಧಾನಿಯಲ್ಲಿ ಮತ್ತೋದು ಬೆಂಕಿ ಅವಘಡ ನಡೆದಿದೆ. ನಗರದ ಮಾರತಹಳ್ಳಿ ಬ್ರಿಡ್ಜ್ ಸಮೀಪದ ಲೂಯಿಸ್ ಫಿಲಿಪ್ ಬಟ್ಟೆ ಅಂಗಡಿಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ಬಟ್ಟೆ ಬೆಂಕಿಗೆ ಆಹುತಿಯಾಗಿದೆ. ತಡರಾತ್ರಿ ನಡೆದಿರುವ ಬೆಂಕಿ ಅವಘಡದಲ್ಲಿ ಭಾರೀ ಅನಾಹುತವಾಗಿದ್ದು, ಘಟನೆಯಲ್ಲಿ ನಾಲ್ವರು ರೋಚಕವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಓರ್ವ ಅಗ್ನಿ ಶಾಮಕ ಸಿಬ್ಬಂದಿ ಗಾಯಗೊಂಡಿದ್ದಾರೆ.
ಬೆಂಕಿನ ಕೆನ್ನಾಲಿಗೆಗೆ ಸುಟ್ಟು ಕರಕಲಾದ ಲೂಯಿಸ್ ಫಿಲಿಪ್ ಬಟ್ಟೆ ಶೋರೂಂ. ಮೂರಂತಸ್ತಿನಲ್ಲಿದ್ದ ಬಟ್ಟೆ ಶೋ ರೂಂ. ಪಕ್ಕದ ಕಟ್ಟಡದಲ್ಲಿದ್ದ ಮೂರ್ನಾಲ್ಕು ಅಂಗಡಿಗೂ ಬೆಂಕಿ ತಗುಲಿ ಕ್ಷಣ ಮಾತ್ರದಲ್ಲಿ ಮೂರು ಕಟ್ಟಡಕ್ಕೆ ಹೊತ್ತಿಕೊಂಡ ಬೆಂಕಿಯ ಕೆನ್ನಾಲಗೆ. ಬೆಂಕಿಯ ಕೆನ್ನಾಲಗೆಗೆ ವಾಹನ ಸವಾರರೇ ಬೆಚ್ಚಿಬಿದ್ದಿದ್ದಾರೆ. ಬಟ್ಟೆ ಶೋ ರೂಂನಿಂದ ಮುಖ್ಯ ರಸ್ತೆವರೆಗೂ ಚಾಚಿಕೊಂಡಿದ್ದ ಬೆಂಕಿ ಕಟ್ಟಡದ ಮುಂದಿದ್ದ ತೆಂಗಿನಮರ, ಟ್ರಾನ್ಸ್ಫಾರ್ಮರ್ಗೂ ತಗುಲಿ ಇನ್ನಷ್ಟೂ ಅನಾಹುತವಾಗಿದೆ.