ಬಸ್ ಗೆ ಬೆಂಕಿ, ತಪ್ಪಿದ ಭಾರಿ ಅನಾಹುತ

ಬಸ್ ಗೆ ಬೆಂಕಿ, ತಪ್ಪಿದ ಭಾರಿ ಅನಾಹುತ

ತುಮಕೂರು, ಮೇ.11, ನ್ಯೂಸ್ ಎಕ್ಸ್ ಪ್ರೆಸ್: ಇಂದು ಬೆಳಗ್ಗೆ ಸುಮಾರು 5 ಗಂಟೆಯ ವೇಳೆ ಖಾಸಗಿ ಬಸ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿದ್ದರೂ ಕೂಡ ಅಪಾಯದಿಂದ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು ಪಾರಾಗಿರುವ ಘಟನೆ ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಶುಕ್ರವಾರ ಸಂಜೆ 6:15ಕ್ಕೆ ಎಸ್ಆರ್ಎಸ್ ಬಸ್ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿಯಿಂದ ಬೆಂಗಳೂರಿಗೆ ಬರುತಿತ್ತು. ಈ ವೇಳೆಯಲ್ಲಿ ತುಮಕೂರಿನಲ್ಲಿ ಆಕಸ್ಮಿಕವಾಗಿ ಬಸ್ ಗೆ  ಬೆಂಕಿ ಹೊತ್ತಿಕೊಂಡಿದೆ. ಮುದ್ದೆಬಿಹಾಳ ಮೂಲದ ಪ್ರಯಾಣಿಕರೊಬ್ಬರು ಬಸ್ಸಿಗೆ ಬೆಂಕಿ ಹೊತ್ತಿಕೊಂಡಿರುವುದನ್ನು ನೋಡಿ ನಿದ್ದೆಯಲ್ಲಿದ್ದ ಉಳಿದ ಪ್ರಯಾಣಿಕರನ್ನು ಎಬ್ಬಿಸಿ ಕೆಳಗಿಳಿಸಿದ್ದಾರೆ. ಇದರಿಂದಾಗಿ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳದವರು ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos