ಪೊಲೀಸರಿಂದ ಫೈರಿಂಗ್

ಪೊಲೀಸರಿಂದ ಫೈರಿಂಗ್

ಬೆಂಗಳೂರು, ಡಿ. 12: ಶಾರ್ಪ್ ಶೂಟರ್ ಹಾಗೂ ರೌಡಿಶೀಟರ್ ಡೈನಮೇಟ್ ಖಲೀಲ್ ಮೇಲೆ ಕೆ.ಜಿ ಹಳ್ಳಿ ಪೊಲೀಸರು ಫೈರಿಂಗ್  ನಡೆಸಿದ್ದಾರೆ. ಖಲೀಲ್ ಕಳೆದ 8 ವರ್ಷಗಳಿಂದ ಪೊಲೀಸರಿಗೆ ಬೇಕಾಗಿದ್ದ ಆರೋಪಿ. ನಿನ್ನೆ ಆತನ ಬಂಧನದ ವೇಳೆ ಇನ್ಸ್ಪೆಕ್ಟರ್ ಅಜಯ್ ಸಾರಥಿ ಗುಂಡಿನ ದಾಳಿ ನಡೆಸಿದ್ದಾರೆ.

ಕಳೆದ 6 ತಿಂಗಳ ಹಿಂದೆ ಖಲೀಲ್, ಚಟ್ನಿ ಸಲೀಂ ಹಾಗೂ ಝುಬೇರ್ ಮೇಲೆ ಗುಂಡಿನ ದಾಳಿ ನಡೆಸಿ, ತಲೆಮರೆಸಿಕೊಂಡು ಓಡಾಡುತ್ತಿದ್ದ. ಈ ಹಿನ್ನೆಲೆ ಖಲೀಲ್ ವಿರುದ್ಧ ಕೆ.ಜಿ.ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿ ಇರುವ ಸ್ಥಳದ ಬಗ್ಗೆ ಖಚಿತ ಮಾಹಿತಿಯೊಂದಿಗೆ ಪೊಲೀಸರು ನಿನ್ನೆ ದಾಳಿ ನಡೆಸಿದ್ರು. ಈ ವೇಳೆ ಖಲೀಲ್ ಪೊಲೀಸರ ಮೇಲೆಯೇ ಹಲ್ಲೆ ಮಾಡಿದ್ದಾನೆ. ಹೀಗಾಗಿ ಇನ್ಸ್ಪೆಕ್ಟರ್ ಅಜಯ್ ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಸದ್ಯ ಗಾಯಾಳು ಖಲೀಲ್ ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos