ಅದ್ಧೂರಿ ಕಾರ್ಯಕ್ರಮದ ಮೂಲಕ ಯುವ ಚಿತ್ರದ ಮೊದಲ ಹಾಡು ರಿಲೀಸ್

ಅದ್ಧೂರಿ ಕಾರ್ಯಕ್ರಮದ ಮೂಲಕ ಯುವ ಚಿತ್ರದ ಮೊದಲ ಹಾಡು ರಿಲೀಸ್

ಬೆಂಗಳೂರು: ಡಾ. ರಾಜ್‌ ಕುಮಾರ್‌ ಕುಟುಂಬದ ಕುಡಿ, ರಾಘವೇಂದ್ರ ರಾಜ್‌ಕುಮಾರ್‌ ಅವರ ಕಿರಿ ಮಗ ಯುವ ರಾಜ್‌ಕುಮಾರ್‌ ನಟನೆಯ ಚೊಚ್ಚಲ ಸಿನಿಮಾ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಅದಕ್ಕೂ ಮೊದಲು ಚಾಮರಾಜನಗರದಲ್ಲಿ ಅದ್ಧೂರಿ ಕಾರ್ಯಕ್ರಮದ ಮೂಲಕ ಯುವ ಚಿತ್ರದ ಮೊದಲ ಹಾಡು ರಿಲೀಸ್ ಆಗಲಿದೆ.

ಯುವ ರಾಜ್‌ಕುಮಾರ್‌ ಚೊಚ್ಚಲ ಸಿನಿಮಾ ಯುವ ಸಿನಿಮಾ, ಪ್ರಚಾರ ಕಣಕ್ಕಿಳಿದಿದೆ. ಸಂತೋಷ್‌ ಆನಂದ್‌ ರಾಮ್‌ ನಿರ್ದೇಶನದಲ್ಲಿ ಮೂಡಿಬಂದಿರುವ ಯುವ ಸಿನಿಮಾ ತಂಡದಿಂದ ಗಾನಬಜಾನ ಕೇಳಿಸಲಿದೆ. ಅಂದರೆ, ಚಿತ್ರದ ಮೊದಲ ಹಾಡಿನ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ವಿಶೇಷ ಏನೆಂದರೆ, ರಾಜ್‌ ಕುಟುಂಬದ ತವರು ಜಿಲ್ಲೆ ಚಾಮರಾಜನಗರದಲ್ಲಿ ನಾಳೆ ಒಬ್ಬನೇ ಶಿವ ಒಬ್ಬನೇ ಯುವ ಹಾಡು ರಿಲೀಸ್‌ ಆಗಲಿದೆ.

ಸದ್ಯ ಚಾಮರಾಜನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಎದುರಿನ ಮೈದಾನದಲ್ಲಿ ಅದ್ಧೂರಿ ಕಾರ್ಯಕ್ರಮದ ಜತೆಗೆ ಯುವ ಚಿತ್ರದ ಮೊದಲ ಹಾಡು ಬಿಡುಗಡೆ ಆಗಲಿದೆ. ಈ ವರೆಗೂ ಯುವ ಸಿನಿಮಾದಿಂದ ಸಣ್ಣ ಸುಳಿವೂ ಹೊರಬಿದ್ದಿರಲಿಲ್ಲ. ಇದೀಗ ಬಿಡುಗಡೆ ಸನಿಹ ಬರುತ್ತಿದ್ದಂತೆ, ಹಾಡನ್ನು ಪ್ರೇಕ್ಷಕನ ಎದೆಗಿಳಿಸಲು ಚಿತ್ರತಂಡ ಪ್ಲಾನ್‌ ಮಾಡಿದೆ. ಬೃಹತ್‌ ವೇದಿಕೆ ಮೇಲೆ ಹಾಡು, ನೃತ್ಯದ ಮೂಲಕ ಚಿತ್ರದ ಕಲಾವಿದರು ಗಮನ ಸೆಳೆಯಲಿದ್ದಾರೆ.

ಯುವ ರಾಜ್ ಕುಮಾರ್ ಅವರ ಚೊಚ್ಚಲ ಚಿತ್ರ ಯುವ. ಈಗಾಗಲೇ ಹಲವು ವಿಶೇಷತೆಗಳಿಂದಲೂ ಸ್ಯಾಂಡಲ್‌ವುಡ್‌ ಅಂಗಳದಲ್ಲಿ ಸದ್ದು ಮಾಡುತ್ತಿದೆ. ಸಿನಿಮಾ ಘೋಷಣೆ ಆದಾಗಿನಿಂದಲೂ ಸುದ್ದಿಯಲ್ಲಿರುವ ಈ ಸಿನಿಮಾ ಇತ್ತೀಚೆಗಷ್ಟೇ ಶೂಟಿಂಗ್‌ ಮುಗಿಸಿಕೊಂಡಿತ್ತು. ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳಲ್ಲೂ ಬಿಜಿಯಾಗಿರುವ ಈ ಸಿನಿಮಾ, ಈಗಾಗಲೇ ರಿಲೀಸ್‌ ದಿನಾಂಕವನ್ನೂ ಘೋಷಣೆ ಮಾಡಿದೆ. ಮಾರ್ಚ್ 28ರಿಂದ ಕರುನಾಡಿನ ಮುಂದೆ ಯುವ ಹಬ್ಬ ಆರಂಭವಾಗಲಿದೆ.

ಫ್ರೆಶ್ ನ್ಯೂಸ್

Latest Posts

Featured Videos