ಒಡಿಶಾ, ಡಿ. 30 : ಆರ್ ಟಿಐ ಕಾರ್ಯಕರ್ತರೊಬ್ಬರ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಐದು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಆರ್ ಟಿಐ ಕಾರ್ಯಕರ್ತ ಅಭಿಮನ್ಯು ಪಾಂಡ ಹತ್ಯೆಗೆ ಸಂಬಂಧಿಸಿದಂತೆ ಕಂಧಮಾಲ್ ಪೊಲೀಸ್ ವರಿಷ್ಠಾಧಿಕಾರಿ ಪ್ರತೀಕ್ ಸಿಂಗ್ ಅವರು ಮಾಧ್ಯಮಗಳಿಗೆ ಆರೋಪಿಗಳ ಬಗ್ಗೆ ಮಾಹಿತಿ ನೀಡಿದರು.
ಹತ್ಯೆಗೆ ಹಳೆ ವೈಷಮ್ಯವೇ ಕಾರಣ. ಆರೋಪಿಗಳಿಂದ ಕಾಟ್ರಿಜ್, ಬೈಕ್ ಮತ್ತು ಆರು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.