ಬೆಂಗಳೂರು: ಮಹಾತ್ಮ ಗಾಂಧೀಜಿ ಅವರು ಬೆಳಗಾವಿಯಲ್ಲಿ ಸ್ವಾತಂತ್ರ್ಯ ಸಂಗ್ರಾಮದ ನೇತೃತ್ವ ವಹಿಸಿಕೊಂಡು 100 ವರ್ಷಗಳಾಗಿರುವ ಹಿನ್ನೆಲೆಯಲ್ಲಿ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ ಬೆಂಗಳೂರಿನ ಕುಮಾರಕೃಪ ರಸ್ತೆಯ ಗಾಂಧಿ ಭವನದಲ್ಲಿಇಂದು (ಬುಧವಾರ ಅ 02) ರಂದು ಬೆಳಗ್ಗೆ ಗಾಂಧಿ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪುಷ್ಪನಮನ ಸಲ್ಲಿಸಿದರು.
ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಾಂಧಿ ಭವನದಿಂದ ವಿಧಾನಸೌಧದ ವರೆಗಿನ ಪಾದಯಾತ್ರೆಗೆ ಚಾಲನೆ ನೀಡಿದರು. ‘ಭಾರತದ ಮಾಜಿ ಪ್ರಧಾನಿಗಳಾದ ದಿವಂಗತ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 120ನೇ ಜನ್ಮದಿನ’ದ ಅಂಗವಾಗಿ ಅವರ ‘ಪ್ರತಿಮೆ ಬಳಿ ಭಾವಚಿತ್ರಕ್ಕೆ ಮಾಲಾರ್ಪಣೆ’ ಮಾಡಿ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸಚಿವರುಗಳು, ಕಾರ್ಯಾಧ್ಯಕ್ಷರುಗಳು, ಹಿರಿಯ ನಾಯಕರು, ಶಾಸಕರು, ಸಂಸದರು, ಮಾಜಿ ಸಚಿವರು/ಶಾಸಕರು ಸೇರಿದಂತೆ ಕಾರ್ಯಾಕರ್ತರು ಭಾಗವಹಿಸಿದ್ದರು.