ಮಂಗಳೂರಿನಲ್ಲಿ ನೂರಾರು ಮಂದಿಗೆ ಫುಡ್ ಪಾಯಿಸನ್

ಮಂಗಳೂರಿನಲ್ಲಿ ನೂರಾರು ಮಂದಿಗೆ ಫುಡ್ ಪಾಯಿಸನ್

ಮಂಗಳೂರು: ಮಕ್ಕಳು ಮತ್ತು ವಿದ್ಯಾರ್ಥಿಗಳು ಸೇರಿದಂತೆ ಸುಮಾರು 100 ಮಂದಿ ಫುಡ್​ ಪಾಯಿಸನ್ ಅಥವಾ ವಿಷಾಹಾರ ಸಮಸ್ಯೆಯಿಂದ ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಾಗುತ್ತಿದ್ದಾರೆ.

ಹೆಚ್ಚುತ್ತಿರುವ ಬಿಸಿಲಿನ ತಾಪ, ನೀರಿನ ಬಿಕ್ಕಟ್ಟು ಇತ್ಯಾದಿ ಕಾರಣಗಳಿಂದಾಗಿ ಮಂಗಳೂರಿನ ಮತ್ತು ಕರಾವಳಿ ಭಾಗದ ಇತರ ಬಹುತೇಕ ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಗಳಲ್ಲಿ ಫುಡ್​ ಪಾಯಿಸನ್​ನ ಹಲವು ಪ್ರಕರಣಗಳು ದೃಢಪಡುತ್ತಿವೆ.

ದಿನಕ್ಕೆ ಐದಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ಹೆಚ್ಚುತ್ತಿರುವ ಬಿಸಿಲಿನ ತಾಪ ಮತ್ತು ನೀರಿನ ಗುಣಮಟ್ಟದಲ್ಲಿನ ಬದಲಾವಣೆಗಳು ಈ ಸಮಸ್ಯೆಗೆ ಕಾರಣವಾಗಿರಬಹುದು ಎಂದು ಆರೋಗ್ಯ ತಜ್ಞರು ಅನುಮಾನ ವ್ಯಕ್ತಪಡಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos