ಕೊರೋನಾ ಪಾಸಿಟಿವ್ ಇರುವ ಪೊಲೀಸರಿಗೆ ಪರಿಹಾರ

ಕೊರೋನಾ ಪಾಸಿಟಿವ್ ಇರುವ ಪೊಲೀಸರಿಗೆ ಪರಿಹಾರ

ಬೆಂಗಳೂರು : ಕೊರೋನಾ ಸೋಂಕಿನಿಂದ ಮೃತಪಟ್ಟ ಪೊಲೀಸರ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದ್ದು, ಇನ್ನೆರಡು ದಿನಗಳಲ್ಲಿ ಹಣ ಬಿಡುಗಡೆಯಾಗಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೊರೋನಾ ಪಾಸಿಟಿವ್ ಇರುವ ಪೊಲೀಸರಿಗೆ ಉತ್ತಮ ಚಿಕಿತ್ಸೆ ನೀಡಬೇಕು. ಬೆಂಗಳೂರಿನಲ್ಲಿ ಐದು ಆಸ್ಪತ್ರೆಗಳನ್ನು ಗುರುತಿಸಿದ್ದೇವೆ. ಎಸಿಎಸ್ ಅವರೊಂದಿಗೆ ಮಾತನಾಡಿದ್ದೇನೆ. ಪ್ರತ್ಯೇಕ ಅಸ್ಪತ್ರೆ, ಟೆಸ್ಟಿಂಗ್ ಘಟಕ ನೀಡಲಿದ್ದಾರೆ ಎಂದರು.

ಕೊರೋನಾ ವೈರಸ್ ನಿಂದ ಮೃತಪಟ್ಟ ಮೂವರು ಪೊಲೀಸರ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ ಘೋಷಣೆಯಾಗಿತ್ತು. ಇನ್ನೆರಡು ದಿನದಲ್ಲಿ ಹಣ ಬಿಡುಗಡೆಯಾಗಲಿದೆ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos