ಬೆಂಗಳೂರು: ನಮ್ಮ ಸ್ಯಾಂಡಲ್ ವುಡ್ ನಲ್ಲಿ ನಟ ದರ್ಶನ್ ಎಂದರೆ ಅತಿ ದೊಡ್ಡ ಮಟ್ಟದ ಕ್ರೇಸ್ ಸೃಷ್ಠಿಯಾಗುತ್ತದೆ. ಅದರೆ ಈಗ ಇವರು ಧರಿಸಿರುವ ಹುಲಿ ಉಗುರಿನ ಲಾಕೆಟ್ ಅತಿ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದೆ.
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಇರುವ ದರ್ಶನ್ ಅವರ ನಿವಾಸದಲ್ಲಿ ಅರಣ್ಯಾಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ. ದರ್ಶನ್ ಬಳಿ ಇರುವುದು ನಿಜವಾದ ಹುಲಿ ಉಗುರು ಹೌದೋ ಅಥವಾ ಅಲ್ಲವೋ ಎಂಬುದು ಗೊತ್ತಾಗಬೇಕಿದೆ. ದರ್ಶನ್ ಹುಲಿ ಉಗುರು ಧರಿಸಿದ್ದ ಫೋಟೋ ವೈರಲ್ ಆದ ಬೆನ್ನಲ್ಲೇ ಅವರ ವಿರುದ್ಧ ದೂರು ನೀಡಲಾಗಿತ್ತು.
ವರ್ತೂರು ಸಂತೋಷ್ ಅವರ ಬಂಧನದ ಬಳಿಕ ಹುಲಿ ಉಗುರು ಧರಿಸಿದ ಹಲವು ಸೆಲೆಬ್ರಿಟಿಗಳಿಗೆ ಸಂಕಷ್ಟ ಎದುರಾಗಿದೆ. ನಟ ದರ್ಶನ್ ಅವರು ಹುಲಿ ಉಗುರು ಧರಿಸಿದ್ದ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅದರ ಬೆನ್ನಲ್ಲೇ ದೂರು ಕೂಡ ದಾಖಲಾಗಿತ್ತು. ಇಂದು ಅರಣ್ಯಾಧಿಕಾರಿಗಳು ದರ್ಶನ್ ಮನೆಗೆ ಬಂದಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಇರುವ ದರ್ಶನ್ ಅವರ ನಿವಾಸದಲ್ಲಿ ಅರಣ್ಯಾಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ.
ದರ್ಶನ್ ಬಳಿ ಇರುವುದು ನಿಜವಾದ ಹುಲಿ ಉಗುರು ಹೌದೋ ಅಥವಾ ಅಲ್ಲವೋ ಎಂಬುದು ಗೊತ್ತಾಗಬೇಕಿದೆ. ಒಂದು ವೇಳೆ ಹುಲಿ ಉಗುರು ಇರುವುದು ಖಚಿತವಾದರೆ ಅವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ.