ಮಾಜಿ ಸಚಿವ ರಾಜಶೇಖರನ್ ವಿಧಿವಶ

ಮಾಜಿ ಸಚಿವ ರಾಜಶೇಖರನ್ ವಿಧಿವಶ

ಬೆಂಗಳೂರು, ಏ. 13 : ದೇಶದ ಸಜ್ಜನ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದ ಎಂ.ವಿ. ರಾಜಶೇಖರನ್ ಅವರು ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಇಂದು ನಿಧನ ವಿಧಿವಶರಾಗಿದ್ದಾರೆ. ಎಂ.ವಿ.ರಾಜಶೇಖರನ್ ಅವರಿಗೆ (92) ವಯಸ್ಸಾಗಿತ್ತು.
ಸೆ. 12, 1928ರಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಕನಕಪುರ ತಾಲ್ಲೂಕಿನ ಮರಳವಾಡಿಯಲ್ಲಿ ಜನಿಸಿದ ಎಂ.ವಿ. ರಾಜಶೇಖರನ್ ಅವರು ಕರ್ನಾಟಕದ ಸಜ್ಜನ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದಾರೆ. 1947-48ರ ಮೈಸೂರು ಚಲೋ ಚಳವಳಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದ ಎಂ.ವಿ. ರಾಜಶೇಖರನ್ ಅವರು, ಅಪ್ಪರ್ ಸೆಕೆಂಡರಿ (ಮಾಧ್ಯಮಿಕ ಶಾಲೆಯಲ್ಲಿ) ವ್ಯಾಸಂಗ ಮಾಡುತ್ತಿದ್ದಾಗಲೇ ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ಮೌಲ್ಯಗಳಿಗೆ ತಮ್ಮನ್ನ ತೊಡಗಿಸಿಕೊಂಡರು. ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದಾಗ ಮಿತ್ರಮೇಳ ಎಂಬ ಸಾಂಸ್ಕೃತಿಕ ಸಂಘಟನೆಯಲ್ಲಿ ದುಡಿದಿದ್ದರು.

1953ರಲ್ಲಿ ದಿಲ್ಲಿ ವಿಶ್ವವಿದ್ಯಾನಿಲಯದಲ್ಲಿ ಕಾನೂನು ವ್ಯಾಸಂಗ ಮುಗಿಸುವ ಮುಂಚೆಯೇ ತಮ್ಮ ತಂದೆಯವರ ಅಕಾಲ ಮರಣದಿಂದ ಮರಳವಾಡಿಗೆ ಮರಳಿ ವ್ಯವಸಾಯಕ್ಕೆ ತಮ್ಮ ಸಂಪೂರ್ಣ ಸಮಯವನ್ನು ಮೀಸಲಿಟ್ಟು, ಪ್ರಗತಿಪರ ರೈತರೆನಿಸಿಕೊಂಡಿದ್ದರು. ಹೆಚ್.ಸಿ. ದಾಸಪ್ಪ ಮತ್ತು ಯಶೋಧರಮ್ಮ ದಾಸಪ್ಪನವರ ಮಧ್ಯಸ್ತಿಕೆಯಿಂದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪನವರ ನಾಲ್ಕನೆಯ ಮಗಳು ಗಿರಿಜಾ ಅವರನ್ನು 1959ರಲ್ಲಿ ವಿವಾಹವಾದರು.
ಕಾಂಗ್ರೆಸ್ ಪಕ್ಷದಲ್ಲಿ ರಾಜ್ಯ ಘಟಕದ ವಿವಿಧ ಸ್ಥಾನಗಳಲ್ಲಿ ಸೇವೆ ಸಲ್ಲಿಸುವ ಅವಕಾಶ ಅವರದಾಯಿತು. ವಿಶೇಷವಾಗಿ ಯೂತ್ ಕಾಂಗ್ರೆಸ್ ರಾಜ್ಯದಲ್ಲಿ ಬಲಗೊಳ್ಳಲು ಅವರು ಕಾರಣಕರ್ತರಾಗಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos