ಪಾಕ್ ಮಾಜಿ ಪ್ರಧಾನಿ ಷರೀಫ್ ಆರೋಗ್ಯ ಸ್ಥಿತಿ ಗಂಭೀರ

ಪಾಕ್  ಮಾಜಿ ಪ್ರಧಾನಿ ಷರೀಫ್ ಆರೋಗ್ಯ ಸ್ಥಿತಿ ಗಂಭೀರ

ಪಾಕಿಸ್ತಾನ, ಅ. 30 : ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಆರೋಗ್ಯ ಸ್ಥಿತಿ ಬಹಳ ಗಂಭೀರವಾಗಿದ್ದು, ಸಾವು- ಬದುಕಿನ ನಡುವೆ ಹೋರಾಡುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಚೌಧರಿ ಶುಗರ್ ಮಿಲ್ಸ್ ಪ್ರಕರಣದಲ್ಲಿ ನವಾಜ್ ಷರೀಫ್ ಮತ್ತು ಅವರ ಕುಟುಂಬದವರನ್ನು ರಾಷ್ಟ್ರೀಯ ತನಿಖಾ ದಳವು ವಿಚಾರಣೆ ನಡೆಸುತ್ತಿತ್ತು. ಆದರೆ ನವಾಜ್ ಷರೀಫ್ ಅವರ ಆರೋಗ್ಯ ಹದಗೆಟ್ಟ ಹಿನ್ನಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇದೀಗ ನವಾಜ್ ಷರೀಫ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಡಾ.ಅಡ್ನಾನ್ ಖಾನ್ ಟ್ವೀಟ್ ಮಾಡಿ, ಮಾಜಿ ಪ್ರಧಾನಿ ಗಂಭೀರವಾಗಿ ಅಸ್ವಸ್ಥರಾಗಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಮೂತ್ರ ಪಿಂಡದ ಕಾರ್ಯ ಕ್ಷೀಣಿಸುವ ಮೂಲಕ ಥ್ರಂಬೋಸೈಟೋಪೆನಿಯಾ ಮತ್ತು ಎನ್ ಎಸ್ ಟಿಇಎಂಐ ಮತ್ತಷ್ಟು ಜಟಿಲವಾಗಿದೆ. ಮಧುಮೇಹ ಮತ್ತು ರಕ್ತದೊತ್ತಡ ನಿಯಂತ್ರಣಕ್ಕೆ ಸಿಗುತ್ತಿಲ್ಲ ಎಂದು ತಿಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos