ಟ್ರ್ಯಾಕ್ಟರ್ ಗೆ ಶಾಲಾ ವಾಹನ ಡಿಕ್ಕಿ ನಾಲ್ವರು ದುರ್ಮರಣ

ಟ್ರ್ಯಾಕ್ಟರ್ ಗೆ ಶಾಲಾ ವಾಹನ ಡಿಕ್ಕಿ ನಾಲ್ವರು ದುರ್ಮರಣ

ಜಮಖಂಡಿ: ಇತ್ತೀಚಿನ ದಿನಗಳಲ್ಲಿ ವಾಹನಗಳ ನಡುವೆ ಭೀಕರ ಅಪಘಾತಗಳ ಸಂಖ್ಯೆ ಹೆಚ್ಚುತ್ತಾ ಇದೆ. ಎಷ್ಟೇ ಮುನ್ನೆಚ್ಚರಿಕೆ ಕ್ರಮ ವಹಿಸಿದರು ಸಹ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಾಯಿದೆ.

ಶಾಲಾ ವಾಹನ ಮತ್ತು ಟ್ರ್ಯಾಕ್ಟ‌ರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಮಕ್ಕಳು ಮೃತಪಟ್ಟಿರುವ ಘಟನೆ  ಜಮಖಂಡಿ ತಾಲೂಕಿನ ಆಲಗೂರ ಗ್ರಾಮದ ಬೆಳಗಾವಿ ಹಾಗೂ ವಿಜಯಪುರ ರಾಜ್ಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ.

ಒಬ್ಬ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಉಳಿದ ಮೂವರು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ. ಎಂಟಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಾಯವಾಗಿದೆ. ಶ್ವೇತಾ ಪಾಟೀಲ (16), ಸಾಗರ ಕಡಕೋಳ (17), ಗೋವಿಂದ ಜಂಬಗಿ (13), ಬಸವರಾಜ್ ಕೊಟಗಿ (17) ಮೃತಪಟ್ಟ ವಿದ್ಯಾರ್ಥಿಗಳು.

ಅಲಗೂರು ಗ್ರಾಮದ ವರ್ಧಮಾನ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ವಾರ್ಷಿಕ ಸಾಂಸ್ಕೃತಿಕ ಕಾರ್ಯಕ್ರಮ ಮುಗಿಸಿ ವಾಪಸ್ ಊರಿಗೆ ಮರಳುತ್ತಿದ್ದಾಗ. ನಿನ್ನೆ ಸ್ನೇಹಿತರೊಟ್ಟಿಗೆ ಕಾರ್ಯಕ್ರಮ ಮುಗಿಸಿಕೊಂಡು ಕವಟಗಿ ಗ್ರಾಮದ ಕಡೆಗೆ ಸ್ಕೂಲ್‌ಬಸ್ ಹೊರಟಿತ್ತು. ರಾತ್ರಿ 12 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಸದ್ಯ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಕಾರ್ಯಕ್ರಮ ಮುಗಿಸಿ ಕವಟಗಿ ಗ್ರಾಮದ ಕಡೆ ಹೊರಟಿದ್ದಾಗ ಎದುರಿನಿಂದ ಬಂದ ಟ್ರ್ಯಾಕ್ಟರಿಗೆ ಶಾಲಾ ವಾಹನ ಡಿಕ್ಕಿಯಾಗಿದೆ. ಜಮಖಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಮೃತರು ವರ್ಧಮಾನ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಾಗಿದ್ದು, ಇಬ್ಬರು ಪಿಯುಸಿ, ಮತ್ತಿಬ್ಬರು 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ.

ಫ್ರೆಶ್ ನ್ಯೂಸ್

Latest Posts

Featured Videos