ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್..!

ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್..!

ಬೆಂಗಳೂರು, ಜ. 11 : ಸ್ವಾಮಿ ವಿವೇಕಾನಂದ ಜನ್ಮದಿನಾಚರಣೆ ಪ್ರಯುಕ್ತ ರಾಜ್ಯ ಸರ್ಕಾರದ ವತಿಯಿಂದ ಇದೇ 12ರಂದು ಸರ್ಕಾರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪದವಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ಟಾಪ್ಗಳನ್ನು ವಿತರಣೆ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ, ದ್ವಿತೀಯ, ತೃತೀಯ ಬ್ಯಾಚ್ನ ಸುಮಾರು 1,09,060 ವಿದ್ಯಾರ್ಥಿಗಳಿಗೆ ಎಚ್ಪಿ ಕಂಪೆನಿಯ ಲ್ಯಾಪ್ಟಾಪ್ಗಳನ್ನು ವಿತರಣೆ ಮಾಡಲಾಗುವುದು. ಇದಕ್ಕಾಗಿ 300 ಕೋಟಿ ಅನುದಾನವನ್ನು ಮೀಸಲಿಟ್ಟಿದ್ದೇವೆ ಎಂದು ಹೇಳಿದರು.

ಫ್ರೆಶ್ ನ್ಯೂಸ್

Latest Posts

Featured Videos