ಬಿಪಿಎಲ್ ಕುಟುಂಬಗಳಿಗೆ 1 ವರ್ಷಕ್ಕೆ 5 ಲಕ್ಷಗಳವರೆಗೆ ಉಚಿತ ಚಿಕಿತ್ಸೆ

ಬಿಪಿಎಲ್ ಕುಟುಂಬಗಳಿಗೆ 1 ವರ್ಷಕ್ಕೆ 5 ಲಕ್ಷಗಳವರೆಗೆ ಉಚಿತ ಚಿಕಿತ್ಸೆ

ಕೆ.ಆರ್.ಪುರ, ಸೆ. 19: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಅಡಿಯಲ್ಲಿ ಬಿಪಿಎಲ್ ಕುಟುಂಬಗಳಿಗೆ ಒಂದು ವರ್ಷಕ್ಕೆ ಐದು ಲಕ್ಷಗಳವರೆಗೆ ಉಚಿತವಾಗಿ ಚಿಕಿತ್ಸೆ ಒದಗಿಸಲಾಗುವುದೆಂದು ನೋಡಲ್ ಅಧಿಕಾರ ಮಹ್ಮದ್ ನಧೀಮ್ ಅಹ್ಮದ್ ಹೇಳಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಕುರಿತು ಜಾಗೃತಿ ಜಾಥಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈ ಯೋಜನೆಯಲ್ಲಿ 1650 ವಿಧಾನಗಳ ಚಿಕಿತ್ಸೆ ಪಡೆಯಬಹುದು. ಇನ್ನೂ ಎಪಿಎಲ್ ಕುಟುಂಬಗಳಿಗೆ ಸರ್ಕಾರದಿಂದ ಶೇ 30 ರಷ್ಟು ಸೌಲಭ್ಯ ದೊರೆಯುತ್ತದೆಂದರು. ಆಧಾರ್ ಕಾರ್ಡ್ ಮತ್ತು ಪಡಿತರ ಕಾರ್ಡ್ ನಿಂದ ಬೆಂಗಳೂರು ಒನ್, ಕರ್ನಾಟಕ ಒನ್, ಸೇವಾ ಸಿಂಧು ಕೇಂದ್ರಗಳಲ್ಲಿ ಆಯುಷ್ಮಾನ್ ಭಾರತ್ ಕಾರ್ಡ ದೊರೆಯುತ್ತದೆಂದರು.

ನಂತರ ಮಾತನಾಡಿದ ಪೂರ್ವ ತಾಲೂಕು ವೈಧ್ಯಾದಿಕಾರಿ ಡಾ.ಚಂದ್ರ ಶೇಖರ್, ದೇಶಾದ್ಯಂತ ಜನರು ಈ ಯೋಜನೆ ಸೌಲಭ್ಯವನ್ನು ಪಡಿಯುತ್ತಿದ್ದಾರೆ. ತುರ್ತು ಚಿಕಿತ್ಸೆಗಳಿಗೆ ಯಾವುದೇ ರೀತಿಯ ರೆಫೆರಲ್ ಇರುವುದಿಲ್ಲ, ನೇರವಾಗಿ ನೊಂದಾಯಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಂಜುನಾಥ್ ಬಂಡಾರಿ, ಹಿರಿಯ ಆರೋಗ್ಯ ನಿರೀಕ್ಷಕರಾದ ಡಾ.ಬಾಬು, ಮಹೇಂದ್ರ, ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ, ವೈಧ್ಯರು, ಆಶಾ ಕಾರ್ಯಕರ್ತರು ಮತ್ತು ಎಸ್ ಇ ಎ ಕಾಲೇಜ್ ವಿದ್ಯಾರ್ಥಿಗಳು ಜಾಥದಲ್ಲಿ ಪಾಲ್ಗೊಂಡಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos