ಗ್ರಾ.ಪಂ. ಚುನಾವಣೆ: ದೂರು ಕೋಶ

ಗ್ರಾ.ಪಂ. ಚುನಾವಣೆ: ದೂರು ಕೋಶ

ತುಮಕೂರು: ಜಿಲ್ಲೆಯಲ್ಲಿ ಎರಡು ಹಂತಗಳಲ್ಲಿ ನಡೆಯುವ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಯಶಸ್ವಿ ನಡೆಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನ ಗೊಳಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಜಿಲ್ಲೆಯ ತಹಶೀಲ್ದಾರ್‌ಗಳಿಗೆ ಸೂಚಿಸಿದರು. ಗ್ರಾಮ ಪಂಚಾಯಿತಿ ಚುನಾವಣಾ ಸಂಬಂಧ ತಹಶೀಲ್ದಾರ್‌ಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.
ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತಗಟ್ಟೆಗಳ ಬಗ್ಗೆ ನಿಯಮಾನುಸಾರ ಪರಿಶೀಲಿಸಬೇಕು. ಚುನಾವಣಾ ನೀತಿ ಸಂಹಿತೆ ಅನುಷ್ಠಾನದ ಬಗ್ಗೆತಹಶೀಲ್ದಾರ್, ಇನ್‌ಸ್ಪೆಕ್ಟರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ತಂಡ ವ್ಯಾಪಕ ಬಿಗಿ ಕ್ರಮಗಳನ್ನು ಕೈಗೊಳ್ಳಬೇಕು. ತಹಶೀಲ್ದಾರ್ ಕಚೇರಿಯಲ್ಲಿ ಚುನಾವಣಾ ದೂರುಗಳಿಗಾಗಿ ದೂರು ಕೋಶ ಹಾಗೂ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಬೇಕು ಎಂದು ಸೂಚಿಸಿದರು.
ಮತಗಟ್ಟೆಗಳಿಗೆ ತಹಶೀಲ್ದಾರ್‌ಗಳು ಖುದ್ದು ಭೇಟಿ ನೀಡಬೇಕು. ಸೌಲಭ್ಯಗಳ ಬಗ್ಗೆ ಪರಿಶೀಲಿಸಬೇಕು. ನ್ಯೂನತೆಗಳಿದ್ದರೆ ಸರಿಪಡಿಸಿ ಮತಗಟ್ಟೆಗಳು ಸಮರ್ಪಕವಾಗಿರುವುದನ್ನು ಖಾತರಿಪಡಿಸಿಕೊಳ್ಳಬೇಕು. ಮುಕ್ತ ಮತ್ತು ನ್ಯಾಯಸಮ್ಮತವಾಗಿ ಚುನಾವಣೆ ನಡೆಸಲು ಸಿದ್ಧತೆಗಳನ್ನು ಮಾಡಿಕೊಳ್ಳಿ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos