ಜಿ.ಟಿ. ದೇವೇಗೌಡರಿಗೆ ಸೋಂಕು ದೃಢ..!

  • In State
  • August 5, 2020
  • 153 Views
ಜಿ.ಟಿ. ದೇವೇಗೌಡರಿಗೆ ಸೋಂಕು ದೃಢ..!

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ರಣಕೇಕೆ ಹಾಕುತ್ತಿದ್ದು, ರಾಜ್ಯ ರಾಜಕಾರಿಗಳನ್ನ ಬೆಂಬಿಡದೇ ಕಾಡ್ತಿದೆ. ಜೆಡಿಎಸ್ ಶಾಸಕರಾದ ಜಿ.ಟಿ. ದೇವೇಗೌಡರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಕೊರೋನಾ ಸೋಂಕು ದೃಢಪಟ್ಟಿರುವ ಬಗ್ಗೆ ಸ್ವತಃ ಶಾಸಕರೇ ಟ್ವೀಟ್ ಮಾಡಿದ್ದು, ನನ್ನ ಕೊವಿಡ್-೧೯ ಟೆಸ್ಟ್ ವರದಿಯಲ್ಲಿ ಪಾಸಿಟಿವ್ ಬಂದಿದೆ. ನನಗೆ ಸೋಂಕಿನ ಯಾವುದೇ ಗುಣಲಕ್ಷಣಗಳಿಲ್ಲ. ವೈದ್ಯರ ಸಲಹೆ ಮೇರೆಗೆ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ೭ ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕೋವಿಡ್ ಪರೀಕ್ಷೆಗೆ ಒಳಪಟ್ಟು, ಕೂಡಲೇ ಕ್ವಾರಂಟೈನ್‌ಗೆ ಒಳಗಾಗಿ ಮುಂಜಾಗ್ರತೆ ವಹಿಸಿ ಎಂದು ವಿನಂತಿಸುತ್ತೇನೆ ಎಂದಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos