ಇಂದಿನಿಂದ 2 ದಿನಗಳ ಕಾಲ ದೆಹಲಿಯಲ್ಲಿ ಜಿ20 ಶೃಂಗಸಭೆ

ಇಂದಿನಿಂದ 2 ದಿನಗಳ ಕಾಲ ದೆಹಲಿಯಲ್ಲಿ ಜಿ20 ಶೃಂಗಸಭೆ

ನವದೆಹಲಿ ಸೆ,9: ರಾಷ್ಟ್ರ ರಾಜಧಾನಿಯಲ್ಲಿ ಇಂದಿನಿಂದ 2 ದಿನಗಳ ಕಾಲ ನಡೆಯಲಿರುವ ಜಿ20 ಶೃಂಗಸಭೆಗೆ ಇನ್ನೇನು ಕೆಲವೇ ಗಂಟೆಗಳಲ್ಲಿ ಜಿ20 ಶೃಂಗಸಭೆ ಶುರುವಾಗಲಿದೆ.ಈ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ವಿಶ್ವದ ಶಕ್ತಿಶಾಲಿ ನಾಯಕರು ಈಗಾಗಲೇ ನವದೆಹಲಿಗೆ ಆಗಮಿಸಿದ್ದಾರೆ.
ಮತ್ತೊಂದಷ್ಟು ನಾಯಕರು ನಿನ್ನೆಯೇ ಭಾರತದ ನೆಲಕ್ಕೆ ಕಾಲಿಟ್ಟಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬಿಡನ್ ನಿನ್ನೆ ಸಂಜೆ ದೆಹಲಿಗೆ ಆಗಮಿಸಿದ್ದಾರೆ. ಈ ಮೆಗಾ ಶೃಂಗಸಭೆಯಲ್ಲಿ 30 ಕ್ಕೂ ಹೆಚ್ಚು ದೇಶಗಳ ಉನ್ನತ ನಾಯಕರು, ಯುರೋಪಿಯನ್ ಒಕ್ಕೂಟದ ಉನ್ನತ ಅಧಿಕಾರಿಗಳು, ಆಹ್ವಾನಿತ ಅತಿಥಿ ದೇಶಗಳು ಮತ್ತು 14 ಅಂತರರಾಷ್ಟ್ರೀಯ ಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಲಿದ್ದಾರೆ.

20 ಸದಸ್ಯ ರಾಷ್ಟ್ರಗಳಾದ ಅರ್ಜೆಂಟೀನಾ, ಆಸ್ಟ್ರೇಲಿಯಾ, ಬ್ರೆಜಿಲ್, ಕೆನಡಾ, ಚೀನಾ, ಫ್ರಾನ್ಸ್, ಜರ್ಮನಿ, ಭಾರತ, ಇಂಡೋನೇಷ್ಯಾ, ಇಟಲಿ, ಜಪಾನ್, ಮೆಕ್ಸಿಕೋ, ರಿಪಬ್ಲಿಕ್ ಆಫ್ ಕೊರಿಯಾ, ರಷ್ಯಾ, ಸೌದಿ ಅರೇಬಿಯಾ, ದಕ್ಷಿಣ ಆಫ್ರಿಕಾ, ಟರ್ಕಿ, ಯುಕೆ, ಯುಎಸ್‌ಎ ಮತ್ತು ಇಯು ದೇಶದ ಪ್ರತಿನಿಧಿಗಳು ಕೂಡ ಭಾಗವಹಿಸುತ್ತಿದ್ದಾರೆ.

ಬಾಂಗ್ಲಾದೇಶ, ಈಜಿಪ್ಟ್, ಮಾರಿಷಸ್, ನೆದರ್ಲ್ಯಾಂಡ್ಸ್, ನೈಜೀರಿಯಾ, ಓಮನ್, ಸಿಂಗಾಪುರ್, ಸ್ಪೇನ್ ಮತ್ತು ಯುಎಇಯ ಪ್ರತಿನಿಧಿಗಳನ್ನು ಈ ಶೃಂಗಸಭೆಗೆ ಆಹ್ವಾನಿಸಲಾಗಿದೆ. ವಿಶ್ವಸಂಸ್ಥೆ, ವಿಶ್ವ ಬ್ಯಾಂಕ್, ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆ, ಹಣಕಾಸು ಸ್ಥಿರತೆ ಮಂಡಳಿ ಮತ್ತು OECD ನಂತಹ ವಿಶ್ವ ಸಂಸ್ಥೆಗಳು ಸಹ G20 ಶೃಂಗಸಭೆಯಲ್ಲಿ ಭಾಗವಹಿಸುತ್ತಿವೆ.

ಫ್ರೆಶ್ ನ್ಯೂಸ್

Latest Posts

Featured Videos