ವಸತಿ ಶಾಲೆಗೆ ಬಕೆಟ್ ತೆಗೆದುಕೊಂಡು ಹೋಗಬೇಕು

ವಸತಿ ಶಾಲೆಗೆ ಬಕೆಟ್ ತೆಗೆದುಕೊಂಡು ಹೋಗಬೇಕು

ಗದಗ,ಜೂ.26: ಜಿಲ್ಲೆಯಲ್ಲೊಂದು ಮೊರಾರ್ಜಿ ದೇಸಾಯಿ ವಸತಿ ಶಾಲೆ ಇದೆ. ಶಾಲೆಗೆ ಹೋಗಬೇಕಾದರೆ ಬುಕ್ಸ್, ನೋಟ್ ಬುಕ್, ಪೆನ್ನು, ಪೆನ್ಸಿಲ್ ಒಯ್ಯೋದು ಸಹಜ. ಆದರೆ ಈ ಶಾಲೆಗೆ ವಿದ್ಯಾರ್ಥಿಗಳು ಹೋಗಬೇಕಾದರೆ ಬಕೆಟ್ ತೆಗೆದುಕೊಂಡು ಹೋಗಲೇಬೇಕು.

ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಕಾಲಕಾಲೇಶ್ವರ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ದುಸ್ಥಿತಿ. ಇಲ್ಲಿನ ಮಕ್ಕಳಿಗೆ ಪಾಠಕ್ಕಿಂತಲೂ ನೀರಿನದ್ದೇ ಜಾಸ್ತಿ ಚಿಂತೆಯಾಗಿದೆ. ನಿತ್ಯವೂ ಪಾಠ ಬಿಟ್ಟು ನೀರಿಗಾಗಿ ಕಾಯುವ ದುಸ್ಥಿತಿ ಇದೆ. ನೀರಿಗಾಗಿ ಮಕ್ಕಳು ಪರದಾಡುತ್ತಿದ್ದರೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಮಾತ್ರ ಕುಂಭಕರ್ಣ ನಿದ್ದೆಗೆ ಜಾರಿದ್ದಾರೆ. ಇದು ಮಕ್ಕಳ ಕೋಪಕ್ಕೆ ಕಾರಣವಾಗಿದೆ ಒಂದ್ಕಡೆ ಸಿಎಂ ತಾವು ಹೋಗೋ ಗ್ರಾಮಗಳ ಶಾಲೆಗೆ ಸೌಲಭ್ಯ ಕೊಡಿಸಿಕೊಂಡು ಗ್ರಾಮವಾಸ್ತವ್ಯ ಮಾಡುತ್ತಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos