ಗಜರಾಜನ ಹಾವಳಿಗೆ ಕೃಷಿ!

ಗಜರಾಜನ ಹಾವಳಿಗೆ ಕೃಷಿ!

ಮಂಗಳೂರು, ಜೂ 18: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮತ್ತೆ ಆರಂಭವಾಗಿದೆ. ಜಿಲ್ಲೆಯ ಕಾಡಂಚಿನ ಸುಳ್ಯ, ಬೆಳ್ತಂಗಡಿ ಪ್ರದೇಶಗಳಲ್ಲಿ ಕಾಡಾನೆಗಳು ತೋಟಗಳಿಗೆ ಲಗ್ಗೆ ಇಡುತ್ತಿವೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಕೊಣಾಜೆ ಗ್ರಾಮದ ತೋಟಕ್ಕೆ ಕಾಡಾನೆಗಳು ದಾಳಿ ನಡೆಸಿವೆ.

ಇಲ್ಲಿಯ ಸುನಿಲ್ ಜೋಸೆಫ್ ಅವರ ತೋಟಕ್ಕೆ 3 ದಿನಗಳಿಂದ ಕಾಡಾನೆಗಳು ದಾಳಿ ನಡೆಸುತ್ತಿವೆ.

ಕಾಡಾನೆಗಳ ಹಾವಳಿಯಿಂದ ಅಪಾರ ಪ್ರಮಾಣದ ಕೃಷಿ ನಾಶವಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಅರಣ್ಯಾಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಸ್ಥಳಿಯರ ಮಾಹಿತಿ ಪ್ರಕಾರ ಅರಣ್ಯ ಪ್ರದೇಶದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿದೆ.

ರಾತ್ರಿ ವೇಳೆ ಕೊಣಾಜೆ, ಕಲ್ಲುಗುಡ್ಡೆ ಪ್ರದೇಶದಲ್ಲಿ ಸಂಚರಿಸುವಾಗ ಎಚ್ಚರಿಕೆ ವಹಿಸಬೇಕು ಎಂಬುದಾಗಿ ಸ್ಥಳೀಯರು ಹಾಗೂ ಅರಣ್ಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos