ಗಮನ ಸೆಳೆದ ಕ್ಷೇತ್ರಗಳು

ಗಮನ ಸೆಳೆದ ಕ್ಷೇತ್ರಗಳು

ಶಿವಮೊಗ್ಗ, ಏ. 23, ನ್ಯೂಸ್ ಎಕ್ಸ್ ಪ್ರೆಸ್: 2019ರ ಲೋಕಸಭಾ ಚುನಾವಣೆಯಲ್ಲಿ ಇಂದು ರಾಜ್ಯದಲ್ಲಿ 14 ಲೋಕಸಭೆ ಕ್ಷೇತ್ರಗಳಿಗೆ 2ನೇ ಹಂತದಲ್ಲಿ ಚುನಾವಣೆ ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿಗಳಿಬ್ಬರ ಪುತ್ರರ ಸ್ಪರ್ಧೆಯಿಂದಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ಜಿದ್ದಾಜಿದ್ದಿನ ಕಣವಾಗಿದೆ.

ಇಲ್ಲಿ ಮಾಜಿ ಸಿಎಂ ದಿ.ಎಸ್. ಬಂಗಾರಪ್ಪ ಅವರ ಮಗ ಮಧು ಬಂಗಾರಪ್ಪ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮಗ ಬಿ.ವೈ. ರಾಘವೇಂದ್ರ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.

ಕಲಬುರಗಿ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸಿದ್ದು, ಇತ್ತೀಚೆಗಷ್ಟೇ ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಉಮೇಶ್ ಜಾಧವ್ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.

ಉತ್ತರ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಸ್ಪರ್ಧಿಸಿದ್ದು, ಆನಂದ್ ಅಸ್ನೋಟಿಕರ್ ಮೈತ್ರಿಕೂಟದ ಅಭ್ಯರ್ಥಿಯಾಗಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos