ನವದೆಹಲಿ, ಡಿ. 22 : ಮಾಜಿ ಕ್ರಿಕೆಟಿಗ, ಸಂಸದ ಗೌತಮ್ ಗಂಭೀರ್ ಶಹದರಾ ಪೊಲೀಸ್ ಉಪ ಆಯುಕ್ತರಿಗೆ ಮನವಿ ಮಾಡಿದ್ದಾರೆ.
‘ನನಗೆ ಹಾಗೂ ನನ್ನ ಕುಟುಂಬಕ್ಕೆ ಅಂತಾರಾಷ್ಟ್ರೀಯ ದೂರವಾಣಿ ಸಂಖ್ಯೆಯೊಂದರಿಂದ ಜೀವ ಬೆದರಿಕೆ ಕರೆಗಳು ಬರುತ್ತಿವೆ. ಈ ವಿಷಯ ಸಂಬಂಧ ಎಫ್ಐಆರ್ ದಾಖಲಿಸಿ ಕುಟುಂಬಕ್ಕೆ ಸೂಕ್ತ ಭದ್ರತೆ ನೀಡಿ’ ಎಂದು ಅವರು ಪೊಲೀಸರಿಗೆ ಮನವಿ ಮಾಡಿದ್ದಾರೆ.
ಕಳೆದ ಶುಕ್ರವಾರ ಸಿಎಎ ಪ್ರತಿಭಟನೆ ಬಗ್ಗೆ ಟ್ವೀಟ್ ಮಾಡಿದ್ದ ಗಂಭೀರ್, ಎಲ್ಲ ಮಾನವ ಹಕ್ಕು ಹೋರಾಟಗಾರರು, ಬಾಲಿವುಡ್ ಗಮನಸೆಳೆಯುವವರು ಮತ್ತು ಹುಸಿ ಉದಾರವಾದಿ ಪತ್ರಕರ್ತರು ಪೊಲೀಸರಿಗೆ ಮಾನವ ಹಕ್ಕುಗಳು ಇವೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಜನಾಭಿಪ್ರಾಯ ಸಂಗ್ರಹಿಸಲು ವಿಶ್ವಸಂಸ್ಥೆಗೆ ಹೋಗಿದ್ದಾರೆ ಎಂದು ಕಿಡಿಕಾರಿದ್ದರು.