70ನೇ ಗಣರಾಜ್ಯೋತ್ಸವ: ರಾಜ್ಯಪಾಲರಿಂದ ಧ್ವಜಾರೋಹಣ

70ನೇ ಗಣರಾಜ್ಯೋತ್ಸವ: ರಾಜ್ಯಪಾಲರಿಂದ ಧ್ವಜಾರೋಹಣ

ಬೆಂಗಳೂರು: 70ನೇ ಗಣರಾಜ್ಯೋತ್ಸವದ ಅಂಗವಾಗಿ ಇಲ್ಲಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ವಿ.ಆರ್.ವಾಲಾ ಅವರು ಧ್ವಜಾರೋಹಣ ನೆರವೇರಿಸಿದರು. 
ಇನ್ನು ಧ್ವಜಾರೋಹಣದ ಬಳಿಕ ರಾಜ್ಯಪಾಲರು ತೆರೆದ ವಾಹನದಲ್ಲಿ ಗೌರವ ರಕ್ಷೆ ಸ್ವೀಕರಿಸಿ ಕವಾಯತು ವೀಕ್ಷಣೆ ಮಾಡಿದರು ಬಳಿಕ ಮಾತನಾಡಿದ ರಾಜ್ಯಪಾಲರು ಬಡವರ ಬಂಧು ಯೋಜನೆಯ ಮೂಲಕ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಕೊಡಲಾಗಿದೆ ಎಂದರು

ಸಹಕಾರಿ ಬ್ಯಾಂಕ್ ಗಳು, ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿನ ರೈತರ ಸಾಲಮನ್ನಾ ಯೋಜನೆ ಜಾರಿ ಮಾಡಲಾಗಿದೆ. 20 ಲಕ್ಷ ಮನೆಗಳ ನಿರ್ಮಾಣದ ಗುರಿ ಹೊಂದಲಾಗಿದೆ. ಮುಖ್ಯಮಂತ್ರಿಗಳ ಮನೆ ನಿರ್ಮಾಣ ಯೋಜನೆಯಡಿ ಮನೆಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಅಂತ ಹೇಳಿದರು.

ಕೊಡಗು, ಮಲೆನಾಡು ಭಾಗದಲ್ಲಿ ಪ್ರಕೃತಿ ವಿಕೋಪವಾಗಿತ್ತು. ಕೊಡಗಿನ ಪ್ರವಾಹದ ವೇಳೆ ಕೇಂದ್ರ, ರಾಜ್ಯಗಳ ಸಂಸ್ಥೆಗಳಿಂದ ತುರ್ತು ಕಾರ್ಯಾಚರಣೆ ನಡೆದಿದೆ. ಕೊಡಗಿನಲ್ಲಿ ಹಾನಿಗೊಳಗಾದವರಿಗೆ ಸ್ಪಂದಿಸಲಾಗಿದೆ. ಸಂಕಷ್ಟದಲ್ಲಿರುವ ಕುಟುಂಬಕ್ಕೆ ನಿಯಮಾನುಸಾರ 3,800 ರೂ. ನೀಡಲಾಗಿದೆ ಅಂತ ಹೇಳಿದರು.

ಫ್ರೆಶ್ ನ್ಯೂಸ್

Latest Posts

Featured Videos