ಡಾ.ಗಂಗೂಬಾಯಿ ಹಾನಗಲ್ ಮೊಮ್ಮಗ ನಿಧನ

ಡಾ.ಗಂಗೂಬಾಯಿ ಹಾನಗಲ್ ಮೊಮ್ಮಗ ನಿಧನ

ಹುಬ್ಬಳ್ಳಿ, ಮೇ.1 5, ನ್ಯೂಸ್ ಎಕ್ಸ್ ಪ್ರೆಸ್: ಖ್ಯಾತ ಹಿಂದೂಸ್ತಾನಿ ಗಾಯಕಿ ಪದ್ಮಭೂಷಣ ಡಾ. ಗಂಗೂಬಾಯಿ ಹಾನಗಲ್ ಅವರ ಮೊಮ್ಮಗ ಮನೋಜ್ ಹಾನಗಲ್ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹುಬ್ಬಳ್ಳಿಯ ತಮ್ಮ ನಿವಾಸದಲ್ಲಿ ಹೃದಯಾಘಾತಕ್ಕೊಳಗಾದ 54 ವರ್ಷದ ಮನೋಜ್ ಹಾನಗಲ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ವೃತ್ತಿಯಲ್ಲಿ ವಕೀಲರಾಗಿದ್ದ ಮನೋಜ್ ಹಾನಗಲ್, ಗಂಗೂಬಾಯಿ ಹಾನಗಲ್ ಪ್ರತಿಷ್ಠಾನದ ಸಂಸ್ಥಾಪಕರಾಗಿದ್ದರು. ಈ ಪ್ರತಿಷ್ಠಾನದ ಮೂಲಕ ದೇಶದ ವಿವಿಧ ಭಾಗಗಳಿಂದ ಗಾಯಕರನ್ನು ಕರೆಸಿ ಹಲವು ಕಾರ್ಯಕ್ರಮಗಳನ್ನು ಏರ್ಪಡಿಸಿ ಕಲಾವಿದರಿಗೆ ವೇದಿಕೆ ಕಲ್ಪಿಸಿಕೊಟ್ಟಿದ್ದರು.

 

ಫ್ರೆಶ್ ನ್ಯೂಸ್

Latest Posts

Featured Videos