“ಗಟ್ಟಿಮೇಳ” ಧಾರಾವಾಹಿ ರಕ್ಷ್ ರಾಮ್ ನಾಯಕನಾಗಿ ನಟಿಸುತ್ತಿರುವ “ಬರ್ಮ” ಚಿತ್ರದ ಮುಹೂರ್ತ!

“ಗಟ್ಟಿಮೇಳ” ಧಾರಾವಾಹಿ  ರಕ್ಷ್ ರಾಮ್ ನಾಯಕನಾಗಿ ನಟಿಸುತ್ತಿರುವ “ಬರ್ಮ” ಚಿತ್ರದ ಮುಹೂರ್ತ!

ಬೆಂಗಳೂರು: ನಮ್ಮ ಸ್ಯಾಂಡಲ್ವುಡ್ ನಲ್ಲಿ ಇತ್ತೀಚಿಗೆ ಹಲವಾರು ಕಥೆ ಆಧಾರಿತ ಸಿನಿಮಾಗಳು ಬರುತ್ತಾ ಇದೆ. ಕನ್ನಡ ಸಿನಿಮಾ ವೆಂದರೆ ಪರ ಭಾಷೆಯಲ್ಲಿಯೂ ಸಹ ಕನ್ನಡ ಸಿನಿಮಾಗಾಗಿ ಅನೇಕ ಅಭಿಮಾನಿಗಳು ಕಾಯುತ್ತಿರುತ್ತಾರೆ ಏಕೆಂದರೆ ಇತ್ತೀಚಿನ ಕನ್ನಡ ಸಿನಿಮಾಗಳು ಅತ್ಯಂತ ದೊಡ್ಡ ಮಟ್ಟದಲ್ಲಿ ಯಶಸ್ವಿಯಾಗಿದೆ ಅದರಿಂದ ನಮ್ಮ ಕನ್ನಡ ಸಿನಿಮಾ ಇಂಡಸ್ಟ್ರಿ ಅತ್ಯಂತ ಉತ್ತುಂಗಕ್ಕೆ ಬೆಳೆದಿದೆ.
ಬಹದ್ದೂರ್, ಭರ್ಜರಿ, ಭರಾಟೆ, ಜೇಮ್ಸ್ ಚಿತ್ರಗಳ ನಿರ್ದೇಶಕ ಹಾಗೂ ಖ್ಯಾತ ಗೀತರಚನೆಕಾರ ಚೇತನ್ ಕುಮಾರ್ ನಿರ್ದೇಶನದ ಹಾಗೂ “ಗಟ್ಟಿಮೇಳ” ಧಾರಾವಾಹಿ ಖ್ಯಾತಿಯ ರಕ್ಷ್ ರಾಮ್ ನಾಯಕನಾಗಿ ನಟಿಸುತ್ತಿರುವ “ಬರ್ಮ” ಚಿತ್ರದ ಮುಹೂರ್ತ ಸಮಾರಂಭ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು.
“ಬರ್ಮ” ನನ್ನ ನಿರ್ದೇಶನದ ಐದನೇ ಚಿತ್ರ ಎಂದು ಮಾತು ಪ್ರಾರಂಭಿಸಿದ ನಿರ್ದೇಶಕ ಚೇತನ್ ಕುಮಾರ್, “ಬರ್ಮ” ಎಂದರೆ ಬ್ರಹ್ಮ ವಾಸಿಸುವ ಜಾಗ ಹಾಗೂ ಒಂದು ಕಂಟ್ರಿಯ ಹೆಸರು ಕೂಡ. ಈ ಹೆಸರು ಚಿತ್ರದ ಕಥೆಗೆ ಪೂರಕವಾಗಿದೆ. ಹಾಗಾಗಿ “ಬರ್ಮ” ಎಂದು ಹೆಸರಿಟ್ಟಿದ್ದೇವೆ. ಚಿತ್ರದ ನಾಯಕ ರಕ್ಷ್ ಈಗಾಗಲೇ ಜನಪ್ರಿಯ ಧಾರಾವಾಹಿಗಳ ಮೂಲಕ ಮನೆಮಾತಾಗಿದ್ದಾರೆ.
ಆದಿತ್ಯ ಮೆನನ್ ಅವರು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇಲ್ಲಿನ ಹಾಗೂ ಬೇರೆ ಭಾಷೆಗಳ ಹೆಸರಾಂತ ಕಲಾವಿದರು ನಮ್ಮ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ನಾಯಕಿ ಸೇರಿದಂತೆ ಉಳಿದ ಕಲಾವಿದರ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಸುವುದಾಗಿ ಹೇಳಿದರು.
ಇಡೀ ಕುಟುಂದವರೆಲ್ಲಾ ಒಟ್ಟಾಗಿ ಕುಳಿತು ನೋಡುವಂತಹ ಒಳ್ಳೆಯ ಕಥೆಯನ್ನು ನಿರ್ದೇಶಕರು ಸಿದ್ದ ಮಾಡಿಕೊಂಡಿದ್ದಾರೆ. ನಮ್ಮ ಸಂಸ್ಥೆಯ ಮೂಲಕ ನಾನು ಹಾಗೂ ನನ್ನ ಪತ್ನಿ ಅನುಶಾ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದೇವೆ. ನಿಮ್ಮೆಲ್ಲರ ಪ್ರೋತ್ಸಾಹ ನಮಗಿರಲಿ ಎಂದರು ನಾಯಕ ರಕ್ಷ್ ರಾಮ್.

ಫ್ರೆಶ್ ನ್ಯೂಸ್

Latest Posts

Featured Videos