ಗೀತಾ ಶಿವರಾಜಕುಮಾರ್ ನಾಮಪತ್ರ ಸಲ್ಲಿಕೆ

ಗೀತಾ ಶಿವರಾಜಕುಮಾರ್ ನಾಮಪತ್ರ ಸಲ್ಲಿಕೆ

ಶಿವಮೊಗ್ಗ: ಈ ಬಾರಿ ಲೋಕಸಭಾ ಚುನಾವಣೆ ರಂಗೇರಿತ್ತು ರಾಜ್ಯದಲ್ಲಿ ಅಭ್ಯರ್ಥಿಗಳು ಭರ್ಜರಿ ಮತಯಾಚಿಸುತ್ತಿದ್ದಾರೆ ಶಿವಮೊಗ್ಗ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಬಿವೈ ರಾಘವೇಂದ್ರ ಅವರು ಸ್ಪರ್ಧಿಸುತ್ತಿದ್ದಾರೆ ಅವರ ವಿರುದ್ದವಾಗಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜಕುಮಾರ್ ಅವರು ಸ್ಪರ್ಧಿಸುತ್ತಿದ್ದಾರೆ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಬಿಜೆಪಿ ಶಾಸಕರಾಗಿರುವಂತಹ ಕೆ ಎಸ್ ಈಶ್ವರಪ್ಪ ರವರು ಸ್ಪರ್ಧಿಸುತ್ತಿದ್ದಾರೆ. ಈ ಬಾರಿ ಶಿವಮೊಗ್ಗ ಕ್ಷೇತ್ರ ಬಾರಿ ಕೂತುಹಲಕಾರಿಗೆ ಕಾರಣವಾಗಿದೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜಕುಮಾರ್ ಇಂದು ನಾಮಪತ್ರ ಸಲ್ಲಿಸಿದರು. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ನಾಮಪತ್ರ ಸ್ವೀಕರಿಸಿದರು. ಈ ವೇಳೆ ಗೀತಾ ಜೊತೆ ಪತಿ ಶಿವರಾಜಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಮಾಜಿ ಸಚಿವ ಕಿಮ್ಮನೆ ರತ್ನಾಕರ ಇದ್ದರು. ನಾಮಪತ್ರ ಸಲ್ಲಿಕೆ ನಂತರ ಇಲ್ಲಿನ ರಾಮಣ್ಣ ಶ್ರೇಷ್ಠಿ ಪಾರ್ಕ್ ನಿಂದ ಮೆರವಣಿಗೆ ಆರಂಭವಾಗಲಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗವಹಿಸಲಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos