ಗೆಲುವಿನ ಹೊಸ್ತಿಲಿನಲ್ಲಿ ಪ್ರಜ್ವಲ್ ರೇವಣ್ಣ.!

ಗೆಲುವಿನ ಹೊಸ್ತಿಲಿನಲ್ಲಿ ಪ್ರಜ್ವಲ್ ರೇವಣ್ಣ.!

ಹಾಸನ, ಮೇ. 23, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುನಾವಣೆಯ ಮತ ಎಣಿಕೆಯು ರಾಜ್ಯದಲ್ಲಿ ಬಿಗಿ ಬದ್ರತೆಯಿಂದ ನಡೆಯುತ್ತಿದೆ. ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು, ರಾಜ್ಯದ ಜನತೆಯ ಕುತೂಹಲ ಕೆರಳಿಸಿದ್ದು, ಲಕ್ಷಕ್ಕೂ ಅಧಿಕ ಮತಗಳ ಅಂತರದ ಮುನ್ನಡೆ ಸಾಧಿಸಿವ ಮುಲಕ ಗೆಲುವಿನ ಹೊಸ್ತಿಲಿನಲ್ಲಿದ್ದಾರೆ.

ಹಾಸನ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರವನ್ನು ಮೊಮ್ಮಗ ಪ್ರಜ್ವಲ್ ರೇವಣ್ಣ ಅವರಿಗೆ ಬಿಟ್ಟುಕೊಟ್ಟಿದ್ದರು.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಸ್ಪರ್ಧಿಸಿದ್ದು, ಇದನ್ನು ವಿರೋಧಿಸಿ ಮಾಜಿ ಸಚಿವ ಎ. ಮಂಜು, ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರ್ಪಡೆಗೊಂಡು ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos