ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ ನಾಗಭೂಷಣ್

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ ನಾಗಭೂಷಣ್

ಬೆಂಗಳೂರು: ನಮ್ಮ ಸ್ಯಾಂಡಲ್ ನಲ್ಲಿ ಅನೇಕ ಚಿತ್ರಗಳಲ್ಲಿ ನಟನೆ ಮಾಡಿರುವಂತಹ ನಟ ನಾಗಭೂಷಣ್ ರವರು  ನಿನ್ನೆ ದಾಂಪತ್ಯ ಜೀವನಕ್ಕೆ ಕಾಲಿಟಿದ್ದಾರೆ. ಇವರು  ಕನ್ನಡದ ಅನೇಕ ಸಿನಿಮಾಗಳಲ್ಲಿ ನಟನೆ ಮಾಡಿದ್ದಾರೆ ಟಗರು ಪಲ್ಯ, ಬಡವರಸ್ಕಲ್,  ಕೌಸಲ್ಯ ಸುಪ್ರಜಾ ರಾಮ ಇನ್ನು ಹಲವು ಸಿನಿಮಾಗಳಲ್ಲಿ ನಟನೆ ಮಾಡಿದ್ದಾರೆ.

ಟಗರು ಪಲ್ಯ ಖ್ಯಾತಿಯ ನಟ ನಾಗಭೂಷಣ್  ಇಂದು ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುಕಾಲದ ಗೆಳತಿ, ನಟಿ ಪೂಜಾ ಪ್ರಕಾಶ್ ಜೊತೆ ನಿನ್ನೆ ಬೆಳಗಾವಿಯಲ್ಲಿ ಅವರು ಮದುವೆ ಆಗಿದ್ದಾರೆ.

ಈ ಮದುವೆಯಲ್ಲಿ ಗೆಳೆಯ ನಾಗಭೂಷಣ್ ಅವರಿಗಾಗಿಯೇ ಸಂಗೀತ ನಿರ್ದೇಶಕ, ಗಾಯಕ ವಾಸುಕಿ ವೈಭವ ಸೊಗಸಾದ ಗೀತೆಗಳನ್ನು ಹಾಡಿದ್ದಾರೆ. ಜೊತೆಗೆ ಹೊಸ ಜೀವನಕ್ಕೆ ವಾಸುಕಿ ದಂಪತಿ ಸಮೇತ ಶುಭ ಹಾರೈಸಿದ್ದಾರೆ.

ಟಗರು ಪಲ್ಯ ಸೇರಿದಂತೆ ಅನೇಕ ಚಿತ್ರಗಳಿಗೆ ನಾಯಕನಾಗಿ ನಟಿಸಿರುವ ನಾಗಭೂಷಣ್, ನಾನಾ ಚಿತ್ರಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗಷ್ಟೇ ಇವರ ಹೊಸ ಸಿನಿಮಾ ಘೋಷಣೆಯಾಗಿದೆ. ಈ ಸಿನಿಮಾವನ್ನು ಡಾಲಿ ಧನಂಜಯ್ ಅವರೇ ನಿರ್ಮಾಣ ಮಾಡುತ್ತಿರುವುದು ವಿಶೇಷ.

ನಾಗಭೂಷಣ್ ಮದುವೆ ಆಗುತ್ತಿರುವ ಪೂಜಾ ಪ್ರಕಾಶ್ ಚಿತ್ರಕಲೆ ಮತ್ತು ಗ್ರಾಫಿಕ್ಸ್ ಡಿಸೈನ್ ನಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಇಂದು ಬೆಳಗಾವಿಯಲ್ಲಿ ಇವರ ವಿವಾಹ ನಡೆದಿದ್ದು, ಫೆಬ್ರವರಿ 2 ರಂದು ಮೈಸೂರಿನಲ್ಲಿ ಆರತಕ್ಷತೆ ನಡೆಯಲಿದೆ. ಡಾಲಿ ಧನಂಜಯ್, ವಾಸುಕಿ ವೈಭವ್, ಪೂರ್ಣಚಂದ್ರ ತೇಜಸ್ವಿ ಸೇರಿದಂತೆ ಹಲವಾರು ಕಲಾವಿದರು ಮತ್ತು ತಂತ್ರಜ್ಞರು ಈ ಮದುವೆಯಲ್ಲಿ ಭಾಗಿಯಾಗಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos