ಕಿಂಗ್ ಕೊಹ್ಲಿ ದಾಖಲೆ ಸರಿಗಟ್ಟಿದ ಗಿಲ್​

ಕಿಂಗ್ ಕೊಹ್ಲಿ ದಾಖಲೆ ಸರಿಗಟ್ಟಿದ ಗಿಲ್​

ಬೆಂಗಳೂರು: ವಿರಾಟ್ ಕೊಹ್ಲಿಯ ಕ್ರಿಕೆಟ್​ಗೆ ಪ್ರವೇಶಿಸಿದ ಬಳಿಕ ಅನೇಕರು ಮುಂದೊಂದು ದಿನ ಸಚಿನ್ ಅವರ ದಾಖಲೆಗಳು ಕೊಹ್ಲಿ ಮುರಿಯಲಿದ್ದಾರೆ ಎಂಬ ಮಾತುಗಳನ್ನು ಆಡುತ್ತಿದ್ದರು. ಇದೀಗ ಅದೇ ರೀತಿ ಗಿಲ್​ ಆಗಮನದ ಬಳಿಕ ವಿರಾಟ್ ದಾಖಲೆ ಮುರಿಯಲು ಮತ್ತೊರ್ವ ಕ್ರಿಕೆಟಿಗ ಸಿದ್ಧರಾಗಿದ್ದಾರೆ ಎನ್ನುತ್ತಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ 2024 ಸೀಸನ್ 17ರ 24ನೇ ಪಂದ್ಯದ ಮೂಲಕ ಶುಭ್​ಮನ್ ಗಿಲ್ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

ಈ ಮೂಲಕ ಐಪಿಎಲ್ ಇತಿಹಾಸದಲ್ಲಿ 3 ಸಾವಿರ ರನ್ ಪೂರೈಸಿದ ಅತೀ ಕಿರಿಯ ಬ್ಯಾಟರ್ ಎಂಬ ದಾಖಲೆಯನ್ನು ಶುಭ್​ಮನ್ ಗಿಲ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ವಿಶೇಷ ದಾಖಲೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು.

ವಿರಾಟ್ ಕೊಹ್ಲಿ ತಮ್ಮ 26ನೇ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದರು. ಈ ಮೂಲಕ ಐಪಿಎಲ್​ನಲ್ಲಿ ಅತೀ ವೇಗವಾಗಿ 3 ಸಾವಿರ ರನ್ ಪೂರೈಸಿದ ಅತ್ಯಂತ ಕಿರಿಯ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದರು.

ಇದೀಗ ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ಈ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. 24ನೇ ವಯಸ್ಸಿನಲ್ಲಿಯೇ 3000 ರನ್ ಕಲೆಹಾಕುವ ಮೂಲಕ ಗುಜರಾತ್ ಟೈಟಾನ್ಸ್ ತಂಡದ ನಾಯಕ ಐಪಿಎಲ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos