ಬಾಲಕಿಯ ಅತ್ಯಾಚಾರ ಮಾಡಿ ಕೊಲೆ.!

ಬಾಲಕಿಯ ಅತ್ಯಾಚಾರ ಮಾಡಿ ಕೊಲೆ.!

ಹಾವೇರಿ, ಮೇ. 7, ನ್ಸೂಸ್ ಏಕ್ಸ್ ಪ್ರಸ್:  6 ವರ್ಷ ಚಿಕ್ಕ ಬಾಲಕಿಯನ್ನು ಅತ್ಯಾಚಾರಗೈದು ಬರ್ಬರವಾಗಿ ಹತ್ಯೆಗೈದಿರುವ ಬೆಚ್ಚಿ ಬೀಳಿಸುವ ಘಟನೆ ನೆನ್ನೆ ತಡರಾತ್ರಿ ನಡೆದಿದೆ.

ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ, ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪಿಗಳು, ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಕಳೆದ ನಿನ್ನೆ ಅತ್ಯಾಚಾರ ಮತ್ತು ಕೊಲೆ ಮಾಡಲ್ಪಟ್ಟ ಬಾಲಕಿ, ಬೇರೆ ಊರಿನಿಂದ ಸಾಮೂಹಿಕ ಕಾರ್ಯಕ್ರಮಕ್ಕಾಗಿ ಪಕ್ಕದ ಊರಿಗೆ ಆಗಮಿಸಿದ್ದರು. ಈ ವೇಳೆ ತಡರಾತ್ರಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ದುಷ್ಕರ್ಮಿಗಳು, ಕತ್ತು ಹಿಸುಕಿ ಹತ್ಯೆ ಮಾಡಿದ್ದಾರೆ.

ಈ ಬಗ್ಗೆ ಹಾವೇರಿಯ ಶಿಗ್ಗಾಂ ಪೊಲೀಸ್ ಠಾಣೆಯಲ್ಲಿ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos