ವೋಟ್‌ ಮಾಡಿದ ಗೋಲ್ಡನ್‌ ಸ್ಟಾರ್‌ ದಂಪತಿ

ವೋಟ್‌ ಮಾಡಿದ ಗೋಲ್ಡನ್‌ ಸ್ಟಾರ್‌ ದಂಪತಿ

ಬೆಂಗಳೂರು: ಲೋಕಸಭೆ ಚುನಾವಣೆ 2024ರ ಮೊದಲನೇ ಹಂತದ ಮತದಾನ ನಡೆಯುತ್ತಿದೆ. ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶವಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ನಗರ ಸೇರಿ 14 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ.

ಸಾಮಾನ್ಯ ಜನರಂತೆ ಸರತಿ ಸಾಲಿನಲ್ಲಿ ನಿಂತು ಸಿನಿ ತಾರೆಯರು ಮತದಾನ ಮಾಡುತ್ತಿದ್ದಾರೆ. ನಟ, ಗೋಲ್ಡನ್ ಸ್ಟಾರ್ ಗಣೇಶ್ ಕೂಡ ಪತ್ನಿಯೊಂದಿಗೆ ಆಗಮಿಸಿ ಹಕ್ಕು ಚಲಾಯಿಸಿದ್ದಾರೆ. ಪತ್ನಿ ಶಿಲ್ಪಾ ಗಣೇಶ್ ರೊಂದಿಗೆ ತೆರಳಿ ಹಕ್ಕು ಚಲಾಯಿಸಿದ್ದಾರೆ.

ಈ ವೇಳೆ ಮಾತನಾಡಿದ ಗಣೇಶ್, ನಾನು ನನ್ನ ಹಕ್ಕನ್ನು ಚಲಾಯಿಸಿದ್ದೇನೆ. ಮತ ಹಾಕುವುದು ಪ್ರತಿಯೊಬ್ಬರ ಕರ್ತವ್ಯ. ನಿಮಗೆ ಯಾರು ಒಳ್ಳೆಯವರು ಅನಿಸುತ್ತಾರೆಯೋ ಅವರಿಗೆ ಮತ ಹಾಕಿ. ಆದರೆ, ಪ್ರತಿಯೊಬ್ಬರೂ ಮತದಾನ ಮಾಡಿ. ಯಾವುದಾದರೂ ಕೆಲಸ ಆಗಿಲ್ಲ ಎಂದು ಕೇಳಬೇಕು ಎಂದರೆ ವೋಟ್ ಹಾಕಬೇಕು. ವೋಟ್ ಹಾಕಿ ಕೇಳಿದರೆ ಅದರ ಬೆಲೆ ಜಾಸ್ತಿ ಇರುತ್ತದೆ ಎಂದು ಹೇಳಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos