ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಸೈಕಲ್ ಭಾಗ್ಯ ಮರು ಪ್ರಾರಂಭ

ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಸೈಕಲ್ ಭಾಗ್ಯ ಮರು ಪ್ರಾರಂಭ

ಬೆಂಗಳೂರು: ಸರ್ಕಾರದಿಂದ ಎಂಟನೇ ತರಗತಿಯವರಿಗೆ ಉಚಿತ ಸೈಕಲ್ ಭಾಗ್ಯವನ್ನು ಮೊಟ್ಟಮೊದಲ ಬಾರಿಗೆ ರಾಜ್ಯದಲ್ಲಿ ಯಡಿಯೂರಪ್ಪ ಸರ್ಕಾರದಲ್ಲಿದ್ದಾಗ ಘೋಷಣೆ ಮಾಡಲಾಗಿತ್ತು ಆದರೆ ಕೋರೊನಾ ಟೈಮಿನಲ್ಲಿ ಈ ಯೋಜನೆ ಸ್ಥಗಿತಗೊಂಡಿತು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆಬಂದಿದೆ  ಮತ್ತೆ ಈ ಯೋಜನೆಯನ್ನು ಪುನರ್ ಪ್ರಾರಂಭಿಸಲು ನಿರ್ಧಾರ ಮಾಡಿದೆ.

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿಯನ್ನು ನೀಡಿದೆ ವಿದ್ಯಾರ್ಥಿಗಳಿಗೆ ಸೈಕಲ್ ನೀಡುವ ಯೋಜನೆಯನ್ನು ಪುನರಾರಂಭಿಸಲು ಶಿಕ್ಷಣ ಇಲಾಖೆ ಮುಂದಾಗಿದೆ.

ಸೈಕಲ್ ಯೋಜನೆ ಪುನರಾರಂಭಕ್ಕೆ ಶಿಕ್ಷಣ ಇಲಾಖೆಯ 320 ಕೋಟಿ ರೂಗಳನ್ನು ಪ್ರಸ್ತಾವನೆಯನ್ನು ಹಣಕಾಸು ಖಾತೆ ಹೊಂದಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ್ದು ಫೆಬ್ರವರಿ 16 ರಂದು ಮಂಡಳಿಯಾಗಲಿರುವ ರಾಜ್ಯ ಬಜೆಟ್ ನಲ್ಲಿ ಈ ಬಗ್ಗೆ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಫ್ರೆಶ್ ನ್ಯೂಸ್

Latest Posts

Featured Videos