ಆಸ್ತಿ ತೆರಿಗೆ ಪಾವತಿದಾರರಿಗೆ ಗುಡ್ ನ್ಯೂಸ್

ಆಸ್ತಿ ತೆರಿಗೆ ಪಾವತಿದಾರರಿಗೆ ಗುಡ್ ನ್ಯೂಸ್

ಬೆಂಗಳೂರು: ಪ್ರತಿ ಹಣಕಾಸು ವರ್ಷದ ಆರಂಭದಲ್ಲಿ ಸಾಮಾನ್ಯವಾಗಿ ಎರಡು ತಿಂಗಳ ಅವಧಿಗೆ ಆಸ್ತಿ ತೆರಿಗೆ ಪಾವತಿಸುವವರಿಗೆ ಶೇ 5ರಷ್ಟು ರಿಯಾಯಿತಿಯನ್ನು ಬಿಬಿಎಂಪಿ ನೀಡುತ್ತಾ ಬಂದಿದೆ. ಆದರೆ, ಈ ವರ್ಷ ಶೇ 5ರ ರಿಯಾಯಿತಿ ಜುಲೈ ಅಂತ್ಯದ ವರೆಗೆ ಜಾರಿಯಲ್ಲಿರಲಿದೆ. ಈ ಸಂಬಂಧ ಬಿಬಿಎಂಪಿ ಗುರುವಾರ ಸುತ್ತೋಲೆ ಹೊರಡಿಸಿದ್ದೆ.

ಆಸ್ತಿ ತೆರಿಗೆ ಪಾವತಿದಾರರಿಗೆ ಬಿಬಿಎಂಪಿಯಿಂದ ಗುಡ್ ನ್ಯೂಸ್ ಸಿಕ್ಕಿತ್ತು. ಶೇಕಡ 5ರಷ್ಟು ರಿಯಾಯಿತಿ ಜುಲೈವರೆಗೆ ವಿಸ್ತರಣೆ ಮಾಡಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕ ಅನುಕೂಲಕ್ಕಾಗಿ ಹಾಗೂ ಗೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆರ್ಥಿಕ ಹಿತ ದೃಷ್ಟಿಯಿಂದ 2024-2025 ನೇ ಸಾಲಿನಲ್ಲಿ ಆಸ್ತಿ ತೆರಿಗೆಯನ್ನು ಸಂಪೂರ್ಣವಾಗಿ ಪಾವತಿಸುವ ತೆರಿಗೆದಾರರಿಗೆ ನೀಡುವ ಅವಧಿಯನ್ನು ದಿನಾಂಕ 1-05-2024 ರಿಂದ 31-7-2024ರ ವರೆಗೆ ವಿಸ್ತರಿಸಿದೆ.

ಫ್ರೆಶ್ ನ್ಯೂಸ್

Latest Posts

Featured Videos