ವಾಣಿಜ್ಯ ಸಿಲಿಂಡರ್ ಬಳಕೆದಾರರಿಗೆ ಗುಡ್​ ನ್ಯೂಸ್

ವಾಣಿಜ್ಯ ಸಿಲಿಂಡರ್ ಬಳಕೆದಾರರಿಗೆ ಗುಡ್​ ನ್ಯೂಸ್

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ  ಸಾರ್ವಜನಿಕರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಇಂದಿನಿಂದ ವಾಣಿಜ್ಯ ಗ್ಯಾಸ್ ಬಳಕೆದಾರರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ.

ನವದೆಹಲಿ: ಹೊಸ ಹಣಕಾಸು ವರ್ಷದ ಮೊದಲ ದಿನ ಎಲ್​​ಪಿಜಿ ದರವನ್ನು ಕಡಿಮೆ ಮಾಡಲಾಗಿದ್ದು, ಇದರಿಂದ ಗ್ಯಾಸ್​ ಬಳಕೆದಾರರಿಗೆ ಗುಡ್​ನ್ಯೂಸ್​ ಸಿಕ್ಕಿದೆ. ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್  ಬೆಲೆ 30.50 ರೂ. ಇಳಿಕೆಯಾಗಿದೆ. ಇನ್ನು 5ಕೆಜಿ ಎಫ್​ಟಿಎಲ್​ ಸಿಲಿಂಡರ್​ ಬೆಲೆ 7.50 ರೂಪಾಯಿ ಇಳಿಕೆಯಾಗಿದೆ. ಈ ಪರಿಷ್ಕೃತ ದರ ಇಂದಿನಿಂದಲೇ ಅನ್ವಯವಾಗಲಿದೆ.

ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಹಿಂದಿನ ತಿಂಗಳ ಅಂತರರಾಷ್ಟ್ರೀಯ ಮಾರುಕಟ್ಟೆಯ ಸರಾಸರಿ ಬೆಲೆಯನ್ನು ಆಧರಿಸಿ ಪ್ರತಿ ತಿಂಗಳ ಮೊದಲನೆಯ ದಿನ ಎಲ್​ಪಿಜಿ ಬೆಲೆಯನ್ನು ಪರಿಷ್ಕರಿಸುತ್ತವೆ. ಗೃಹಬಳಕೆಯ ಗ್ಯಾಸ್ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಆದರೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಳೆದ ತಿಂಗಳು ಗೃಹ ಬಳಕೆಯ ಎಲ್​​ಪಿಜಿ ಸಿಲಿಂಡರ್ ಬೆಲೆ 100 ರೂ. ಇಳಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆಯನ್ನು ನೀಡಿದ್ದರು.

 

ಫ್ರೆಶ್ ನ್ಯೂಸ್

Latest Posts

Featured Videos