ಮುಂಬೈ ಇಂಡಿಯನ್ಸ್‌ ಅಭಿಮಾನಿಗಳಿಗೆ ಸಿಹಿಸುದ್ದಿ

ಮುಂಬೈ ಇಂಡಿಯನ್ಸ್‌ ಅಭಿಮಾನಿಗಳಿಗೆ ಸಿಹಿಸುದ್ದಿ

ಬೆಂಗಳೂರು: 2024ರ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಸತತ ಮೂರು ಪಂದ್ಯಗಳನ್ನು ಸೋತು, ಕಳಪೆ ಆರಂಭ ಪಡೆದಿರುವ ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ಇದೀಗ ಕೆಲವು ಸಂತೋಷದ ಸುದ್ದಿಗಳನ್ನು ಪಡೆದುಕೊಂಡಿದೆ.

ಏಕೆಂದರೆ, ಮುಂಬೈ ಇಂಡಿಯನ್ಸ್ ತಂಡದ ಸ್ಫೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್ ಅವರು ಪ್ರಸಕ್ತ ಐಪಿಎಲ್ ಅವೃತ್ತಿಯಲ್ಲಿ ಆಡಲು ಫಿಟ್ ಎಂದು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಘೋಷಿಸಿದೆ. ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್, ಡಿಸೆಂಬರ್ 2023ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದ ವೇಳೆ ಪಾದದ ಗಾಯಕ್ಕೆ ತುತ್ತಾದರು.

33 ವರ್ಷದ ಬಲಗೈ ಬ್ಯಾಟರ್ ಸೂರ್ಯಕುಮಾರ್ ಯಾದವ್ ಅವರಿಗೆ ಎನ್‌ಸಿಎ ಫಿಟ್ನೆಸ್ ಸರ್ಟಿಫಿಕೇಟ್ ನೀಡದ ಕಾರಣ 2024ರ ಐಪಿಎಲ್ ಋತುವಿನ ಮೊದಲ ಮೂರು ಪಂದ್ಯಗಳಿಂದ ಹೊರಗುಳಿಬೇಕಾಯಿತು.

ಇದೀಗ ಅವರು ಅಂತಿಮವಾಗಿ ಐದು ಬಾರಿಯ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದ ಆಯ್ಕೆಗೆ ಅನುಮತಿ ಪಡೆದಿದ್ದಾರೆ. ಮುಂಬೈ ಇಂಡಿಯನ್ಸ್‌ನ ಮುಂದಿನ ಪಂದ್ಯವನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭಾನುವಾರ, ಏಪ್ರಿಲ್ 7ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆಡಲು ಲಭ್ಯವಿರಲಿದ್ದಾರೆ ಎಂದು ವರದಿಯಾಗಿದೆ. “ಸೂರ್ಯಕುಮಾರ್ ಯಾದವ್ ಈಗ ಫಿಟ್ ಆಗಿದ್ದಾರೆ. ಎನ್‌ಸಿಎ ಅವರನ್ನು ಕೆಲವು ಅಭ್ಯಾಸ ಪಂದ್ಯಗಳನ್ನು ಆಡುವಂತೆ ಮಾಡಿತು ಮತ್ತು ಅವರು ಉತ್ತಮವಾಗಿ ಕಾಣುತ್ತಿದ್ದರು. ಇದೀಗ ಅವರು ಮುಂಬೈ ಇಂಡಿಯನ್ಸ್ ತಂಡವನ್ನು ಸೇರಬಹುದಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos